Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಶಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೊಡಿ, ಇಲ್ಲವೇ ದಾವಣಗೆರೆ ಮರೆತುಬಿಡಿ

Wednesday, 13.06.2018, 4:00 PM       No Comments

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ನೇತೃತ್ವದ ನೂತನ ಸರ್ಕಾರದಲ್ಲಿ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ಬುಧವಾರ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್​ ಅವರನ್ನು ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಶಾಮನೂರು ಶಿವಶಂಕರಪ್ಪ ಬೆಂಬಲಿಗರಾದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಸ್ಥಳೀಯ ನಗರ ಪಾಲೀಕೆ ಸದಸ್ಯರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪರಮೇಶ್ವರ್​ ಅವರ ಸದಾಶಿವನಗರದ ನಿವಾಸದ ಎದುರು ಪ್ರತಿಭಟನೆ ನಡೆಸಿದ ಅವರು, ನಂತರ ಪರಮೇಶ್ವರ್​ ಅವರನ್ನು ಭೇಟಿ ಮಾಡಿ, ಎರಡನೇ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಒಂದು ವೇಳೆ ಸಚಿವ ಸ್ಥಾನ ಕೊಡದೆ ಹೋದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಎಚ್ಚರಿಸಿದರು.

ಶಾಮನೂರು ಶಿವಶಂಕರಪ್ಪ ಅವರಿಗೆ ಮಂತ್ರಿ ಸ್ಥಾನ ನೀಡಲೇಬೇಕು. ಇಲ್ಲದೇ ಹೋದರೆ, ದಾವಣಗೆರೆಯಲ್ಲಿ ಕಾಂಗ್ರೆಸ್​ಅನ್ನು ಮರೆತು ಬಿಡಿ. ಲೋಕಸಭೆ ‌ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಕಾಂಗ್ರೆಸ್​ಗೆ ಕಷ್ಟವಾಗಲಿದೆ ಎಂದೂ ಹೇಳಿದರು.

ಇದಕ್ಕೆಲ್ಲ ಸಾವಧಾನವಾಗಿಯೇ ಪ್ರತಿಕ್ರಿಯಿಸಿದ ಪರಮೇಶ್ವರ್​, ಆಯ್ತು ಬಿಡ್ರಪ್ಪ, ಮಾಡೋಣ ಎಂದು ಎಲ್ಲರನ್ನು ಸಮಾಧಾನಪಡಿಸಿದರು.
ಇದೇ ನಿಯೋಗ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್​ ಅವರಿಗೆ ಮನವಿ ಸಲ್ಲಿಸಿತು.

 

Leave a Reply

Your email address will not be published. Required fields are marked *

Back To Top