More

    ಶಾಮನೂರು ಹೇಳಿಕೆ ವೈಯಕ್ತಿಕ ವಿಷಯ

    ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎನ್ನುವುದು ಶಾಸಕ ಶಾಮನೂರು ಶಿವಶಂಕರಪ್ಪ ಅವರ ವೈಯಕ್ತಿಕ ವಿಷಯವಾಗಿದೆ. ಆ ಕುರಿತು ಅವರನ್ನೇ ಕೆಳಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.

    ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನೊಬ್ಬ ಸರ್ಕಾರದ ಅಂಗವಾಗಿ ಹೇಳುವುದಾದರೆ ಸರ್ಕಾರ ಮತ್ತು ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ ಎಂದರು.

    ನಮ್ಮ ಪಕ್ಷದಲ್ಲಿ ಭವಿಷ್ಯವಾಣಿ ಇಲ್ಲ. ಮುಂಬರುವ ಸಂಕ್ರಾತಿ ಒಳಗಾಗಿ ಸರ್ಕಾರ ಬೀಳುತ್ತದೆ ಎಂದು ಹೇಳುವವರನ್ನೇ ಕೇಳಬೇಕು. ಸಂವಿಧಾನ ಅಡಿಯಲ್ಲಿ ಸರ್ಕಾರ ರಚನೆಯಾಗಿದ್ದು, 135 ಜನ ಶಾಸಕರಿದ್ದಾರೆ. ಆದರೂ, ಯಾವ ಆಧಾರದ ಮೇಲೆ ಸರ್ಕಾರ ಬೀಳುತ್ತದೆ ಎಂದು ಅವರನ್ನೇ ಕೇಳಬೇಕು. 2024ರ ವೇಳೆಗೆ ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವುದಿಲ್ಲ. ಕೇಂದ್ರದಲ್ಲಿ 10 ವರ್ಷದಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಹಿಂದುತ್ವ ಬಿಟ್ಟು ಬೇರೆ ವಿಷಯ ಮಾತನಾಡುತ್ತಿಲ್ಲ. 11 ರಾಜ್ಯಗಳಲ್ಲಿ ಸರ್ಕಾರವನ್ನು ಕಡೆವಿದ್ದಾರೆ. ಸುಮಾರು 1ಸಾವಿರಕ್ಕೂ ಅಧಿಕ ಶಾಸಕರನ್ನು ಖರೀದಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆಯಿತು. ಇಲ್ಲಿಯವರೆಗೆ ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆಯಾಗುತ್ತಿದ್ದು, ಡಾಲರ್ 85 ರೂ. ಏರಿಕೆ ಕಂಡಿದೆ. ದೊಡ್ಡ ದೊಡ್ಡ ಉದ್ಯಮಿಗಳಿಗೆ ಅನುಕೂಲವಾಗಿದೆ ವಿನಃ ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಸಮಸ್ಯೆ ಉಂಟಾಗುತ್ತಿದೆ. 1000, 500 ಮುಖಬೆಲೆಯ ನೋಟು ಚಲಾವಣೆ ರದ್ದುಗೊಳಿಸಿದ ಬಳಿಕ ಉದ್ಯಮಿಗಳಿಗೆ ಲಾಭವಾಗಿದೆ. ಬಿಜೆಪಿ ಸರ್ಕಾರದಿಂದ ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ದೂರಿದರು.

    ಮುಂಬರುವ ಲೋಕಸಭಾ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಎಲ್ಲ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಯುತ್ತಿದೆ. ಪಕ್ಷದಿಂದ ಯಾರಿಗೆ ಟಿಕೆಟ್ ಕೊಡಬೇಕು ಎಂಬುದು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts