ಹಿಂದೂಗಳ ನರಮೇಧ ನಡೆಯುತ್ತಿರುವಾಗ ಕ್ರಿಕೆಟ್​ ಆಡುತ್ತಿರುವುದು ನಾಚಿಕೆಗೇಡಿನ ಸಂಗತಿ; ಭಾರತ-ಬಾಂಗ್ಲಾ ಸರಣಿ ಕುರಿತು ಆರ್​ಎಸ್​ಎಸ್​ ಕಿಡಿ

Ratan Sharadha

ಮುಂಬೈ: ಮಾಜಿ ಸೈನಿಕರ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರಕ್ಕೆ 650ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇತ್ತ ದೇಶದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಾಂಗ್ಲಾ ಆತಿಥ್ಯದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಸ್ಥಳಾಂತರಗೊಂಡಿದ್ದು, ಅಲ್ಲಿನ ಕ್ರಿಕೆಟ್​ ಮಂಡಳಿ ಕೂಡ ಪರಿಸ್ಥಿತಿ ಸುಧಾರಿಸುವವರೆಗೂ ಆತಿಥ್ಯ ವಹಿಸಬಾರದೆಂಬ ನಿರ್ಧಾರಕ್ಕೆ ಬಂದಿದೆ.

ಇತ್ತ ಪುರುಷರ ತಂಡವು ಸದ್ಯ ಭಾರತ ಪ್ರವಾಸದಲ್ಲಿದ್ದು, ಎರಡು ಪಂದ್ಯಗಳ ಟೆಸ್ಟ್​ ಸರಣಿ ಆಡಲು ಭಾರತಕ್ಕೆ ಬಂದಿಳಿದಿದೆ. ಈಗಾಗಲೇ ಸರಣಿಯ ಮೊದಲ ಪಂದ್ಯ ಇಂದು (ಸೆಪ್ಟೆಂಬರ್ 19) ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದ್ದು, ಪ್ರವಾಸಿ ತಂಡಕ್ಕೆ ಆತಿಥೇಯರು ಶಾಕ್​ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಭಾರತ ಮಾತ್ರ ಬಾಂಗ್ಲಾದೇಶದ ವಿರುದ್ಧ ಸರಣಿ ಆಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಕೂಡಲೇ ಆಟವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಆರ್​ಎಸ್​ಎಸ್​ನ ಹಿರಿಯ ವಿಚಾರವಾದಿ ರತನ್​ ಶಾರದಾ, ಶೇಖ್ ಹಸೀನಾ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಆ ದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿರುವಾಗಲೇ ಬಾಂಗ್ಲಾದೇಶದೊಂದಿಗೆ ಭಾರತ ಕ್ರಿಕೆಟ್ ಆಡುತ್ತಿರುವುದು ಅಮಾನವೀಯ ಮತ್ತು ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೆಲಸದ ಒತ್ತಡದಿಂದ ಮಗಳ ಸಾವು, ಅಂತ್ಯಕ್ರಿಯೆಗೂ ಬಾರದ ಸಹೋದ್ಯೋಗಿಗಳು; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

2021ರಲ್ಲಿ ಭಾರತ ತಂಡವು ಟಿ20 ಟೂರ್ನಿಯಲ್ಲಿ ಭಾಗಿಯಾಗುವಾಗ ಕ್ ಲೈವ್ಸ್ ಮ್ಯಾಟರ್ ಅಭಿಯಾನವನ್ನು ಬೆಂಬಲಿತ್ತು. ಮಹಿಳೆಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ಆಸ್ಟ್ರೇಲಿಯಾ ಕ್ರಿಕೆಟ್​ ತಂಡವು ಅಫ್ಘಾನಿಸ್ತಾನದೊಂದಿಗೆ ಆಡಲು ನಿರಾಕರಿಸಿತು. ಅದೇ ರೀತಿ ವರ್ಣಭೇದ ನೀತಿಯ ಕಾರಣದಿಂದಾಗಿ ದಕ್ಷಿಣ ಆಫ್ರಿಕಾವನ್ನು 21 ವರ್ಷಗಳ ಕಾಲ ಬಹಿಷ್ಕರಿಸಲಾಯಿತು. ಅದೇ ರೀತಿ ಸೆಪ್ಟೆಂಬರ್​ 27ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್​ ಪಂದ್ಯವನ್ನು ರದ್ದುಗೊಳಿಸುವುದು ಸೂಕ್ತ.

ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೆಟ್ಟದಾಗಿ ನಡೆಸಿಕೊಂಡರೂ ಪಂದ್ಯಗಳನ್ನು ಮುಂದುವರಿಸುವ ಬಿಸಿಸಿಐ ನಿರ್ಧಾರದ ಬಗ್ಗೆ ಸಂಘ ಪರಿವಾರದೊಳಗೆ ಭಾರೀ ಅಸಮಾಧಾನವಿದೆ. ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಈ ಕೂಡಲೇ ತಮ್ ನಿಲುವನ್ನು ತಿಳಿಸಬೇಕೆಂದು ಆರ್​ಎಸ್​ಎಸ್​ನ ಹಿರಿಯ ವಿಚಾರವಾದಿ ರತನ್​ ಶಾರದಾ ಆಗ್ರಹಿಸಿದ್ದಾರೆ.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…