VIDEO: ಇನ್‌ಸ್ಟಾಗ್ರಾಂ ವಿಡಿಯೋಗಳಲ್ಲಿ ಶಮಿ ಪತ್ನಿ ಮಿಂಚಿಂಗ್....!

shami wife_web
Published on

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಧ್ಯಮ ವೇಗದ ಬೌಲರ್ ಮೊಹಮದ್ ಶಮಿ ಪತ್ನಿ ಹಸಿನ್ ಜಹಾನ್, ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರುವಾಸಿ. ಮೊಹಮದ್ ಶಮಿ ಜತೆಗಿನ ವೈವಾಹಿಕ ಜೀವನ ಕಡಿತಗೊಳಿಸಿಕೊಂಡಿರುವ ಹಸಿನ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಗ್ಲಾಮರಸ್ ವಿಡಿಯೋ ಹರಿಬಿಡುವ ಮೂಲಕ ಅಭಿಮಾನಿಗಳ ಗಮನಸೆಳೆಯುತ್ತಿದ್ದಾರೆ. ಮಾಡೆಲಿಂಗ್‌ಗಾಗಿ ೆಟೋ ಶೂಟ್‌ಗಳ ವಿಡಿಯೋ, ಹಿಂದಿ ಚಲನಚಿತ್ರಗಳ ಹಾಡುಗಳಿಗೆ ಹೆಜ್ಜೆ ಹಾಕುವ ವಿಡಯೋಗಳ ಮೂಲಕ ಶಮಿ ಪತ್ನಿ ಇನ್‌ಸ್ಟಾಗ್ರಾಂ ಬಳಕೆದಾರರ ನೆಚ್ಚಿನ ತಾರೆಯಾಗಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಸುಮಾರು 43 ಸಾವಿರ ಹಿಂಬಾಲಕರನ್ನು ಹೊಂದಿರುವ ಹಸಿನ್ ಅವರ ವಿಡಿಯೋ, ೆಟೋಗಳಿಗೆ ಅಭಿಮಾನಿಗಳಿಂದ ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುವ ಹಸಿನ್ ಜಹಾನ್, ಧಾರ್ಮಿಕ ಮುಖಂಡರ ಕೆಂಗಣ್ಣಿಗೂ ಗುರಿಯಾಗಿದ್ದೂ ಇದೆ. ಆದರೆ, ಇದು ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜಹಾನ್, ವೈಯಕ್ತಿಕ ಬದುಕಿಗೂ ತಲೆಕೆಡಿಸಿಕೊಳ್ಳದೇ ತಮ್ಮನೆಚ್ಚಿನ ಕ್ಷೇತ್ರಕಷ್ಟೇ ಗಮನಹರಿಸಿದ್ದಾರೆ. ಗ್ಲಾಮರಸ್ ಆಗಿ ಕಾಣಿಸಿಕೊಂಡು ತಾವೇ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ. 2018ರಲ್ಲಿ ಶಮಿ ವಿರುದ್ಧ ಕೌಟುಂಬಿಕ ಹಿಂಸೆಯಡಿ ಕೇಸು ದಾಖಲಿಸಿದ್ದರು. ಬಳಿಕ ಇಬ್ಬರದ ನಡುವೆ ಪೊಲೀಸ್ ಠಾಣೆಯಲ್ಲಿ ಸಂಧಾನಕ್ಕೆ ಯತ್ನಿಸಿದಾದರೂ ಪ್ರಯೋಜನವಾಗಲಿಲ್ಲ. ವೈಯಕ್ತಿಕ ಜೀವನದಲ್ಲಿ ಅನುಭವಿಸಿದ ಹಿಂಸೆಗೆ ಮೂರು ಬಾರಿ ಆತ್ಮಹತ್ಯೆಗೆ ಯೋಚಿಸಿದ್ದೆ ಎಂದು ಸ್ವತಃ ಶಮಿ ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಹೇಳಿಕೊಂಡಿದ್ದರು. 2014ರಲ್ಲಿ ಶಮಿ ಹಾಗೂ ಜಹಾನ್ ವಿವಾಹವಾಗಿದ್ದರು. ದಂಪತಿಗೆ ಒಂದು ಹೆಣ್ಣುಮಗುವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net