More

    ಮೂಗೂರಲ್ಲಿ ಶನೈಶ್ಚರಸ್ವಾಮಿ ಪಲ್ಲಕ್ಕಿ ಉತ್ಸವ

    ಮೂಗೂರು: ಶ್ರೀ ಶನೈಶ್ಚರಸ್ವಾಮಿಯ 67ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಗ್ರಾಮದಲ್ಲಿ ಶನಿವಾರ ಸಂಜೆ ಸ್ವಾಮಿ ಅವರ ಹೂವಿನ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.

    ವಾರ್ಷಿಕೋತ್ಸವ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು-ತೋರಣ ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಶನಿವಾರ ಬೆಳಗ್ಗೆ 8.30ಕ್ಕೆ ಗ್ರಾಮದ ಶ್ರೀ ಶನೈಶ್ಚರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಕಾಕ ವಾಹನೋತ್ಸವ ನಡೆಯಿತು. ನಂತರ ಬೆಳಗ್ಗೆಯಿಂದ ಸಂಜೆವರೆಗೂ ಗ್ರಾಮಸ್ಥರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.

    ಸಂಜೆ 6.30ಕ್ಕೆ ವಾದ್ಯಗೋಷ್ಠಿ, ಪೂಜಾ ಕುಣಿತದೊಂದಿಗೆ ದೇವರ ಹೂವಿನ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅಲ್ಲಲ್ಲಿ ಭಕ್ತರಿಂದ ಅನ್ನಸಂತರ್ಪಣೆ ನಡೆಯಿತು. ಪಲ್ಲಕ್ಕಿ ಉತ್ಸವವು ದೇವಾಲಯಕ್ಕೆ ಮರಳಿದ ಬಳಿಕ ದೇವರಿಗೆ ಮಹಾ ಮಂಗಳಾರತಿ ಮಾಡಲಾಯಿತು.

    ರಾತ್ರಿ 11ಗಂಟೆಗೆ ಬದನವಾಳು ಶ್ರೀ ಚಂದ್ರಶೇಖರ ಶಾಸ್ತ್ರಿ ವೃಂದದವರಿಂದ ರಾಜ ವಿಕ್ರಮ ಅಥವಾ ಶನಿ ಪ್ರಭಾವ ಹರಿಕಥೆ ನಡೆಯಿತು. ಇದೇ ವೇಳೆ ದೇವಾಲಯದ ಆವರಣದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು. ದೇಗುಲ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts