More

    ಶಂಕರಪುರ ವಲಯ ಸಾಧನ ಸಮಾವೇಶ, ಅಷ್ಟಲಕ್ಷ್ಮೀ ಪೂಜಾ ಕಾರ್ಯಕ್ರಮ

    ಮದ್ದೂರು: ಪಾಲಕರು, ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳು ರೂಢಿಸಿಕೊಳ್ಳಬೇಕೆಂದು ಆರೆತಿಪ್ಪೂರು ಜೈನ ಮಠದ ಶ್ರೀ ಸಿದ್ಧಾಂತ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಲಹೆ ನೀಡಿದರು.

    ಸಮೀಪದ ಚಾಮನಹಳ್ಳಿಯಲ್ಲಿ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಂಕರಪುರ ವಲಯದ ಸಾಧನ ಸಮಾವೇಶ ಹಾಗೂ ಅಷ್ಟಲಕ್ಷ್ಮೀ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಲು ಪಾಲಕರು ಕಷ್ಟಪಟ್ಟಿರುತ್ತಾರೆ. ಹಾಗಾಗಿ ಮಕ್ಕಳು ಪಾಲಕರನ್ನು ದೇವರಂತೆ ಪೂಜಿಸಬೇಕು ಎಂದರು.

    ಮಹಿಳೆಯರು ಇಂದು ಸಮಾಜದಲ್ಲಿ ಆರ್ಥಿಕ ಹಾಗೂ ನೆಮ್ಮದಿಯಿಂದ ಜೀವನ ಮಾಡಲು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಜಾರಿಗೆ ತಂದಿರುವ ಯೋಜನೆಗಳು ಸಹಕಾರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರು ಮಾಡಿರುವ ಸಾಧನೆ ಅನನ್ಯ. ಇಡೀ ದೇಶಕ್ಕೆ ಮಾದರಿಯಾಗುವಂತೆ ರಾಜ್ಯದಲ್ಲಿ 700 ಕೆರೆಗಳ ಹೂಳೆತ್ತಿಸಿರುವುದು ದೊಡ್ಡ ಸಾಧನೆ ಎಂದರು.

    ಮದ್ದೂರಿನ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ರಿತೇಶ್ ಶೆಟ್ಟಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರು ಕಡಿಮೆ ಬಡ್ಡಿದರದಲ್ಲಿ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

    ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ, ಗ್ರಾಪಂ ಅಧ್ಯಕ್ಷ ಸಿದ್ದರಾಜು, ಜನಜಾಗೃತಿ ಸದಸ್ಯ ಲಿಂಗೇಗೌಡ್ರು, ವಲಯದ ಮೇಲ್ವಿಚಾರಕಿ ಸುಮಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts