

ಕಾರ್ಕಳ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆ ನಡೆಯಿತು. ಕಾರ್ಕಳ ಗ್ರಾಮಾಂತರ ಮತ್ತು ನಗರ ಠಾಣಾ ವ್ಯಾಪ್ತಿಯ ಮುಸ್ಲಿಂ, ಹಿಂದು ಮುಖಂಡರು ಭಾಗವಹಿಸಿದ್ದರು. ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭ ಅಹಿತಕರ ಘಟನೆ ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ತಿಳಿಸಲಾಯಿತು. ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣಾ ಪೊಲೀಸ್ ನಿರೀಕ್ಷಕ ನಾಗೇಶ್ ಕದ್ರಿ, ಕಾರ್ಕಳ ನಗರ ಠಾಣಾ ಪಿಎಸ್‌ಐ ಧನಂಜಯ, ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ.ಆರ್. ಉಪಸ್ಥಿತರಿದ್ದರು.