More

    NCP ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ

    ನವದೆಹಲಿ: ಹಿರಿಯ ರಾಜಕಾರಣಿ ಮತ್ತು ಮಹಾರಾಷ್ಟ್ರ ರಾಜಕೀಯದ ಧೀಮಂತ ನಾಯಕ, ಶರದ್ ಪವಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ಇಂದು ಪ್ರಕಟಿಸಿದರು.

    ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪವಾರ್ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

     ಇದನ್ನೂ ಓದಿ:  Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , ಭಜರಂಗದಳ ನಿಷೇಧ!

    ಆದರೆ ರಾಜಕೀಯದಿಂದ ಹಿಂದೆ ಸರಿಯುತ್ತಿಲ್ಲ. ನನ್ನ ಸಹೋದ್ಯೋಗಿಗಳೇ, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ ಎಂದು ಪವಾರ್ ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!

    ಪವಾರ್ ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು ಮತ್ತು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನ್, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವಿನ ಅಸಂಭವ ಮೈತ್ರಿಯನ್ನು ಒಟ್ಟಿಗೆ ಸೇರಿಸುವಲ್ಲಿ ದೊಡ್ಡ ಪಾತ್ರವನ್ನು ಹೊಂದಿದ್ದರು. ಪವಾರ್ ನಂತರ ಪಕ್ಷದ ಮುಖ್ಯಸ್ಥ ಸ್ಥಾನ ಯಾರು ಅಲಂಕರಿಸಲಿದ್ದಾರೆ ಎಂಬ ಬಗ್ಗೆ ಇನ್ನೂ ಯಾವುದೇ ಘೋಷಣೆಯಾಗಿಲ್ಲ.

    ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್‌ ಗಾಂಧಿ ವಿಧಿವಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts