ಶಾರದಾ ಕೃಷ್ಣ ಪ್ರಶಸ್ತಿಗೆ ಡಾ. ಜೀವನ್​ ರಾಂ ಸುಳ್ಯ ಆಯ್ಕೆ

udp-23-jivan ram sulya
Published on

ಉಡುಪಿ: ಸಂಸತಿ ವಿಶ್ವ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಹೆಬ್ರಿ ಶ್ರೀ ರಾಘವೇಂದ್ರ ಚಾರಿಟೇಬಲ್​ ಟ್ರಸ್ಟ್​ ಪ್ರಾಯೋಜಿತ 'ಶಾರದಾಕೃಷ್ಣ ಪ್ರಶಸ್ತಿಗೆ ಈ ಬಾರಿ ಕನ್ನಡ ರಂಗಭೂಮಿಯ ಪ್ರಸಿದ್ಧ ರಂಗನಿರ್ದೇಶಕ, ನಟ, ಡಾ. ಜೀವನ್​ ರಾಂ ಸುಳ್ಯ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್​ ಎಚ್​.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 24 ವರ್ಷಗಳಿಂದ ಮೂಡುಬಿದಿರೆಯ ಆಳ್ವಾಸ್​ ಶಿಕ್ಷಣ ಪ್ರತಿಷ್ಠಾನದಲ್ಲಿನ ಆಳ್ವಾಸ್​ ರಂಗ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿರುವ ಜೀವನ್​ ರಾಂ ಅವರು, ತನ್ನ ವಾಸದ ಮನೆಯನ್ನೇ ಕಲಾಕ್ಷೇತ್ರವನ್ನಾಗಿಸಿದ ಅಪರೂಪದ ರಂಗಕರ್ಮಿ. ಇವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷರಾಗಿದ್ದಾರೆ. ಜನವರಿ ತಿಂಗಳಲ್ಲಿ ನಡೆಯುವ ಸಂಸತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ರೂ. 25,000 ನಗದು ಬಹುಮಾನ ಹೊಂದಿದೆ ಎಂದು ತಿಳಿಸಿದರು.

ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್​ ಶೆಣೈ, ಶಾರದಾಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಶ್ರೀ ರಾಘವೇಂದ್ರ ಚಾರಿಟೇಬಲ್​ ಟ್ರಸ್ಟ್​ ಹೆಬ್ರಿಯ ಸದಸ್ಯ ವೈಕುಂಠ ಹೇರಳೆ, ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net