More

    ಶರಣ ಸಂಸ್ಕೃತಿ ಉತ್ಸವಕ್ಕೆ ಭರದ ಸಿದ್ಧತೆ

    ಗುತ್ತಲ: ಇಲ್ಲಿಗೆ ಸಮೀಪದ ನರಸೀಪುರ ಗ್ರಾಮದಲ್ಲಿ ಜ. 15ರಂದು ಆಯೋಜಿಸಿರುವ ನಿಜಶರಣ ಅಂಬಿಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವ, ವಚನ ಮಹಾರಥೋತ್ಸವ, ಅಂಬಿಗರ ಚೌಡಯ್ಯನವರ 900ನೇ ಜಯಂತಿ, ಶಾಂತಮುನಿ ಸ್ವಾಮೀಜಿ 4ನೇ ವರ್ಷದ ಸ್ಮರಣೋತ್ಸವ, ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಪೀಠಾರೋಹಣದ 3ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಸಮಾರಂಭದ ಸಿದ್ಧತೆ ಭರದಿಂದ ಸಾಗಿದೆ.

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸುವರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಅನೇಕ ಗಣ್ಯರು, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.

    12ನೇ ಶತಮಾನದಲ್ಲಿದ್ದ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ನಾಡಿಗೆ ಬಹುದೊಡ್ಡ ಸಂದೇಶ ಕೊಟ್ಟಿದ್ದಾರೆ. ಆ ಮಹಾಪುರುಷನ ಐಕ್ಯಸ್ಥಳದಲ್ಲಿ 900ನೇ ಜಯಂತಿ, ವಚನಗಳ ಮಹಾರಥೋತ್ಸವಕ್ಕೆ ನಾಡಿನಾದ್ಯಂತ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಯಶಸ್ಸಿಗಾಗಿ ಸಾವಿರಾರು ಕಾರ್ಯಕರ್ತರು ಸೋಮವಾರದಿಂದಲೇ ಕೆಲಸದಲ್ಲಿ ತೊಡಗಿದ್ದಾರೆ. ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಅವರ ವಚನಗಳು ನೇರ, ನಿಷ್ಠುರವಾಗಿವೆ. ಅಂತಹ ವಚನಗಳ ಮಹಾರಥೋತ್ಸವವನ್ನು ಕಳೆದ ವರ್ಷದಿಂದ ಆರಂಭಿಸಲಾಗಿದೆ ಎಂದು ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ‘ವಿಜಯವಾಣಿ’ಗೆ ತಿಳಿಸಿದರು.

    ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಘೊಷಣೆ ನಿರೀಕ್ಷೆ: ಕೂಡಲ ಸಂಗಮ ಮಾದರಿಯಲ್ಲಿ ತುಂಗಭದ್ರಾ ನದಿ ದಡದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಅಭಿವೃದ್ಧಿಗೊಳಿಸಲು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ಸಿಎಂ ಘೊಷಿಸುವ ನಿರೀಕ್ಷೆಯೂ ಹೆಚ್ಚಿದೆ.

    ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮದ ಸ್ಥಳದ ಬಳಿ ಹೆಲಿಪ್ಯಾಡ್ ನಿರ್ವಿುಸಿದ್ದು, ಮಧ್ಯಾಹ್ನ 1 ಗಂಟೆಗೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ನಿಲುಗಡೆ, ಊಟದ ವ್ಯವಸ್ಥೆಯನ್ನು ಮಠದ ಸಮಿತಿಯವರು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

    ಕಾರ್ಯಕ್ರಮದಲ್ಲಿ ಬಂದೋಬಸ್ತ್​ಗೆ 5 ಡಿವೈಎಸ್ಪಿ, 10 ಸಿಪಿಐ, 20 ಪಿಎಸ್​ಐ, 300 ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕದಳದವರನ್ನು ನಿಯೋಜಿಸಲಾಗಿದೆ ಎಂದು ಗುತ್ತಲ ಪಿಎಸ್​ಐ ಶಂಕರಗೌಡ ಪಾಟೀಲ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts