ಕುರುಗೋಡು: ವಚನ ಸಾಹಿತ್ಯಕ್ಕೆ ಮಡಿವಾಳ ಮಾಚಿದೇವರ ಕೊಡುಗೆ ಅಪಾರ ಎಂದು ಸಂಘದ ತಾಲೂಕು ಘಟಕದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ದಮ್ಮೂರು ಗ್ರಾಮದಲ್ಲಿ ಮಡಿವಾಳ ಮಾಚಿದೇವ ಗ್ರಾಮ ಘಟಕ ಉದ್ಘಾಟನೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಬೇಕು. ಶರಣರ ಕಾಯಕ ಮತ್ತು ಜೀವನ ಸಂದೇಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡರೆ ಅವರ ಜಯಂತಿಗಳು ಅರ್ಥಪೂರ್ಣವಾಗುತ್ತವೆ ಎಂದರು.
ಗ್ರಾಮ ಘಟಕದ ಅಧ್ಯಕ್ಷ ಮಾರೆಣ್ಣ, ಉಪಾಧ್ಯಕ್ಷ ಮಂಜು, ಖಜಾಂಚಿ ಹೊನ್ನೂರ, ಕಾರ್ಯದರ್ಶಿಗಳಾದ ವೆಂಕಟೇಶ್, ಹುಲಿಗೆಪ್ಪ, ರಾಜ, ವೀರೇಶ್, ವಿರೂಪಾಕ್ಷಿ ಇತರರಿದ್ದರು.