

ಶಿರ್ವ: ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀ ದುರ್ಗಾಪರಮೆಶ್ವರಿ ದೇವಳದಲ್ಲಿ ಸೆ.22ರಿಂದ ಅ.2ರ ತನಕ ವರ್ಷಾವಧಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ನಿತ್ಯವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಪ್ರತಿದಿನ ಸಂಜೆ 4.30ರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅ.1ರಂದು ವರ್ಷಾವಧಿ ಚಂಡಿಕಾ ಯಾಗ, ಮಧ್ಯಾಹ್ನ ಪೂರ್ಣಾಹುತಿ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವಾ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಭಾಗವಹಿಸುವರು. ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ಅಧ್ಯಕ್ಷತೆ ವಹಿಸಲಿದ್ದು, ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಉಪಸ್ಥಿತರಿರುವರು ಎಂದು ದೇವಳದ ಪ್ರಕಟಣೆ ತಿಳಿಸಿದೆ.