28.5 C
Bengaluru
Monday, January 20, 2020

ಜಿಲ್ಲಾದ್ಯಂತ ಶರನ್ನವರಾತ್ರಿ ಘಟಸ್ಥಾಪನೆ ಸಂಭ್ರಮ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನಡೆಯುವ ವಿಶೇಷ ಪೂಜೆ ಹಾಗೂ ಶರನ್ನವರಾತ್ರಿ ಹಿನ್ನೆಲೆಯಲ್ಲಿ ಬುಧವಾರ ಘಟಸ್ಥಾಪನೆ ನೆರವೇರಿತು.

ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ದೇವಿ ಮೂರ್ತಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ರುದ್ರಾಭಿಷೇಕ, ಕುಂಕುಮಾರ್ಚನೆ, ಸಹಸ್ರ ನಾಮಾವಳಿ ಜರುಗಿದವು. ಕೆಲವೆಡೆ ದೇವಿ ಮೂರ್ತಿಯೊಂದಿಗೆ ಕುಂಭ ಮೆರವಣಿಗೆ ನಡೆಯಿತು. ಸಂಜೆ ವೇಳೆ ಬಹುತೇಕ ದೇವಸ್ಥಾನಗಳಲ್ಲಿ ಘಟಸ್ಥಾಪನೆಯೊಂದಿಗೆ ಪುರಾಣ ಪ್ರವಚನ ಆರಂಭಗೊಂಡವು. ವಿವಿಧ ಮಠಾಧೀಶರು, ಕೀರ್ತನಕಾರರು, ಪ್ರವಚನಕಾರರು ಪುರಾಣ ಪ್ರವಚನ ಆರಂಭಿಸಿದರು.

ಘಟಸ್ಥಾಪನೆ

ಬೆಟಗೇರಿ ಹಳೇ ಮತ್ತು ಹೊಸ ಬನಶಂಕರಿ ದೇವಸ್ಥಾನ, ಅಂಬಾಭವಾನಿ ದೇವಸ್ಥಾನ, ಹಳೇ ಸರಾಫ್ ಬಜಾರ್ ಹತ್ತಿರದ ಜಗದಂಬಾ ದೇವಸ್ಥಾನ, ತುಳಜಾ ಭವಾನಿ ದೇವಸ್ಥಾನ, ಅಧ್ಯಾತ್ಮ ವಿದ್ಯಾಶ್ರಮ, ಕಳಸಾಪುರ ರಸ್ತೆ ಶಾಂತಿನಾಥ ದಿಗಂಬರ ಜೈನ ಮಂದಿರ, ನಂದೀಶ್ವರಮಠ, ನಂದಿವೇರಿ ಮಠ, ಅಡವೀಂದ್ರಸ್ವಾಮಿ ಮಠ, ಮುಕ್ಕಣ್ಣೇಶ್ವರ ಮಠ, ವಿಭೂತಿ ಓಣಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ, ರಾಜೀವಗಾಂಧಿ ನಗರದ ಬನ್ನಿಮಹಾಂಕಾಳಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಘಟಸ್ಥಾಪನೆ ನೆರವೇರಿಸಲಾಯಯಿತು.

ಪುರಾಣ-ಪ್ರವಚನ 

ಅಭಿನವ ಶಿವಾನಂದ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಅಡ್ನೂರ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಮಹೇಶ್ವರಸ್ವಾಮಿ ಹೊಸಳ್ಳಿಮಠ, ಕೊಟ್ಟೂರೇಶ್ವರ ಸ್ವಾಮೀಜಿ, ಶಂಕರಾನಂದ ಸ್ವಾಮೀಜಿ, ನೀಲಮ್ಮತಾಯಿ ಅಸುಂಡಿ, ಪ್ರವಚನಕಾರರಾದ ಚಂದ್ರಾಮಪ್ಪ ಕಣಗಾಲ, ತಿಪ್ಪಣ್ಣ ಶ್ಯಾವಿ ಅವರಿಂದ ಪುರಾಣ ಪ್ರವಚನ ಆರಂಭಗೊಂಡಿತು.

9 ದಿನಗಳ ಕಾಲ ವಿಶೇಷ ಪೂಜೆ

ಅ. 19ರ ವರೆಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಲಲಿತ ಸಹಸ್ರನಾಮಾವಳಿ ಪಾರಾಯಣ, ದುರ್ಗಾಷ್ಟಮಿ, ನವದುರ್ಗೆಯರ ಪೂಜೆ, ಅನ್ನದಾಸೋಹ, ಸಾಂಸ್ಕೃತಿಕ ಕಾರ್ಯಕ್ರಮ, ಉಡಿತುಂಬುವ ಕಾರ್ಯಕ್ರಮ ಜರುಗಲಿದೆ. ಅ. 19ರಂದು ವಿಜಯದಶಮಿ, ಪ್ರವಚನ ಮಂಗಲ, ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಲಿದೆ.

ಬೆಳ್ಳಿ ಅಂಬಾರಿ

ಪಂಚ ಟ್ರಸ್ಟ್ ಕಮಿಟಿ, ತರುಣ ಸಂಘ, ಮಹಿಳಾ ಮಂಡಳ ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ ಅ. 19ರಂದು ಜಗದಂಬಾ ಹಾಗೂ ತುಳಜಾ ಭವಾನಿ ದೇವಸ್ಥಾನಗಳಿಂದ ‘ಶ್ರೀದೇವಿ ಪಾಲ್ಲಕ್ಕಿ ಸೇವೆ’ ಹಾಗೂ ಬೆಳ್ಳಿ ಅಂಬಾರಿಯಲ್ಲಿ ಶ್ರೀದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುವುದು.

ಹೊಸಹಳ್ಳಿಯಲ್ಲಿ ಶ್ರೀದೇವಿ ಪುರಾಣ

ಗದಗ ತಾಲೂಕಿನ ಬೂದೇಶ್ವರ ಹೊಸಹಳ್ಳಿ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅ. 19ರ ವರೆಗೆ ಶ್ರೀದೇವಿ ಪುರಾಣ ಜರುಗಲಿದೆ. ನಿತ್ಯ ಸಂಜೆ 7ಕ್ಕೆ ಮಂಜುನಾಥ ಈರಗಾರ ಅವರಿಂದ ಪುರಾಣ ಪಠಣ ನಡೆಯಲಿದೆ.

ಗಾರ್ಗಿಪೇಟೆ ಈಶ್ವರ ದೇವಸ್ಥಾನ

ಬೆಟಗೇರಿಯ ಗಾರ್ಗಿಪೇಟೆ ಈಶ್ವರ ದೇವಸ್ಥಾನದಲ್ಲಿ ಬುಧವಾರ ಘಟಸ್ಥಾಪನೆ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆಯೊಂದಿಗೆ ನವರಾತ್ರಿ ಉತ್ಸವ ಆರಂಭವಾಯಿತು. ಅ. 18ರ ವರೆಗೆ ನಿತ್ಯ ಸಂಜೆ 7ಕ್ಕೆ ನಾರಾಯಣಪ್ಪ ದೇವಧರ, ಮಲ್ಲೇಶಪ್ಪ ಅಣ್ಣಿಗೇರಿ ಅವರಿಂದ ಶ್ರೀದೇವಿ ಪುರಾಣ ಪಠಣ ಜರುಗಲಿದೆ. ಅ. 18ರಂದು ಶ್ರೀದೇವಿಯ ಪುರಾಣ ಮಂಗಲೋತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ.

ಬೆಳಧಡಿಯಲ್ಲಿ ದೇವಿ ಪುರಾಣ

ಗದಗ ತಾಲೂಕಿನ ಬೆಳಧಡಿ ಗ್ರಾಮದಲ್ಲಿ ಶಂಭುಲಿಂಗಯ್ಯ ಕಲ್ಮಠ ನಿವಾಸದಲ್ಲಿ 26ನೇ ವರ್ಷದ ದೇವಿ ಪುರಾಣ ಅ. 19ರ ವರೆಗೆ ಜರುಗಲಿದೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...