ಮದಕ ರಾಜರಾಜೇಶ್ವರಿ ಸಾನ್ನಿಧ್ಯದಲ್ಲಿ ಶರನ್ನವರಾತ್ರಿ

Ism_Madaka
Published on

ಪುತ್ತೂರು ಗ್ರಾಮಾಂತರ: ಪಡುಮಲೆಯ ಶ್ರೀ ಮದಕ ರಾಜರಾಜೇಶ್ವರಿ ದೇವಸ್ಥಾನದಲ್ಲಿ 2ನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಗುರುವಾರ ಆರಂಭಗೊಂಡಿದ್ದು, ವಾಸುದೇವ ತಂತ್ರಿ ಮತ್ತು ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ.

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಶ್ರೀ ರಾಜರಾಜೇಶ್ವರಿ ಗುಡಿಯಲ್ಲಿ ದೀಪ ಪ್ರಜ್ವಲಿಸುವ ಮೂಲಕ ಅ.11ರವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.

ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಳ್ವ ಗಿರಿಮನೆ, ಕಾರ್ಯದರ್ಶಿ ಗಂಗಾಧರ ರೈ ಮೇಗಿನಮನೆ, ಕೋಶಾಧಿಕಾರಿ ಶಿವಕುಮಾರ್ ಮೂಂಡೋಳೆ, ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು, ಮಹಿಳಾ ಸಮಿತಿ ಅಧ್ಯಕ್ಷ ಶಂಕರಿ ಪಟ್ಟೆ, ಸ್ಥಳೀಯ ಪ್ರಮುಖರಾದ ಸುರೇಶ್ ರೈ ಪಲ್ಲತ್ತಾರು, ರಾಜೇಶ್ ರೈ ಮೇಗಿನಮನೆ, ರಘುರಾಮ ಪಾಟಾಳಿ ಶರವು, ಪುಷ್ಪರಾಜ ಆಳ್ವ ಗಿರಿಮನೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net