17 C
Bangalore
Monday, December 9, 2019

ಮಕ್ಕಳ ಆಸೆ, ಆಸಕ್ತಿಗೆ ಸಿಗಲಿ ಪ್ರೋತ್ಸಾಹ

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ವಿಜಯವಾಣಿ ಸುದ್ದಿಜಾಲ ಹುಲಸೂರು
ಮಕ್ಕಳ ಆಸೆ, ಆಸಕ್ತಿ ಗುರುತಿಸಿ ಪ್ರೋತ್ಸಾಹಿಸಬೇಕು. ಅಂದಾಗಲೇ ಅವರು ಜೀವನದಲ್ಲಿ ಮಹತ್ತರ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಪುಟ್ಟಗೌರಿ ಖ್ಯಾತಿಯ ಕಿರುತೆರೆ ನಟಿ ರಂಜಿತಾ ರಾಘವನ್ ಹೇಳಿದರು.
ಹಾಲಹಳ್ಳಿ ರಸ್ತೆಯಲ್ಲಿರುವ ಜಗದ್ಗುರು ಅಲ್ಲಮಪ್ರಭು ದೇವರ ಶೂನ್ಯ ಪೀಠ ಅನುಭವ ಮಂಟಪದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಶರಣ-ಸಂಸ್ಕೃತಿ, ವಚನ ರಥೋತ್ಸವದಲ್ಲಿ ಮಾತನಾಡಿದ ಅವರು, ಸಾಧನೆಗೆ ಸ್ಪಷ್ಟ ಗುರಿ ಮತ್ತು ಮಾರ್ಗದರ್ಶನ ತೋರಲು ಗುರು ಬೇಕು. ಸಮಾಜಕ್ಕೆ ಮಾರ್ಗದರ್ಶನ ತೋರುವ ಸಮರ್ಥವಾದ ಗುರು ಶ್ರೀ ಡಾ.ಶಿವಾನಂದ ಮಹಾಸ್ವಾಮೀಜಿ ನಿಮಗೆ ಸಿಕ್ಕಿದ್ದಾರೆ ಎಂದರು.
12ನೇ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸ್ತ್ರೀ ಸಮಾನತೆ ಕಲ್ಪಿಸಿದವರು ಗುರು ಬಸವಣ್ಣನವರು. ಶರಣರು ನಡೆದಾಡಿದ ಕಲ್ಯಾಣ ನಾಡಿನ ಈ ನೆಲ ಪವಿತ್ರವಾಗಿದೆ. ಮಕ್ಕಳನ್ನು ಬೆಳೆಸುವಾಗ ಗಂಡು ಮಕ್ಕಳಂತೆ ಮಗಳನ್ನು ಬೆಳೆಸಿದ್ದೇವೆ ಎಂಬ ಬದಲಿಗೆ ಹೆಮ್ಮೆಪಡುವಂತೆ ಬೆಳೆಸಿದ್ದೇನೆ ಎಂಬುದು ಮುಖ್ಯ. ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕು ಎಂದು ಬಯಸುವ ಬದಲಿಗೆ ಒಳ್ಳೆಯ ಸಂಸ್ಕಾರ ನೀಡಿ ಉತ್ತಮ ನಾಗರಿಕರಾಗಿ ರೂಪಿಸುವಲ್ಲಿ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ವಚನದಲ್ಲಿ ನಾಮಾಮ್ರತವ ತುಂಬಿ ಎಂಬ ವಚನ, ಪುಟ್ಟಗೌರಿ ಧಾರಾವಾಹಿ ಹಾಡು ಸೇರಿ ಕೆಲ ಹಾಡುಗಳನ್ನು ಹಾಡಿ ಗಮನಸೆಳೆದ ರಂಜಿತಾ, ಸಾಮಾಜಿಕ ಕಳಕಳಿ ಇಟ್ಟುಕೊಂಡೇ ತಾವು ಧಾರಾವಾಹಿಯಲ್ಲಿ ಪಾತ್ರ ನಿರ್ವಹಿಸಿದ್ದು, ಬಾಲ್ಯ ವಿವಾಹ ವಿರುದ್ಧ ಜಾಗೃತಿ ಮೂಡಿಸುವುದೇ ಪುಟ್ಟಗೌರಿ ಧಾರಾವಾಹಿ ಮೂಲ ಆಶಯ ಎಂದರು.
ರಂಜಿತಾ ರಾಘವನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಜೆಯಿಂದಲೇ ಮಹಿಳೆಯರು ಕಾರ್ಯಕ್ರಮದ ಕಡೆ ಹೆಜ್ಜೆ ಹಾಕಿದರು. ತಡರಾತ್ರಿವರೆಗೂ ಕೊರೆಯುವ ಚಳಿಯಲ್ಲೂ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಕದಲದೆ ಕುಳಿತಿದ್ದು ಕಂಡು ಬಂದಿತು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಮಾತನಾಡಿ, ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ಸಿಗಬೇಕು. ಗರ್ಭಿಣಿಯರ ಆರೋಗ್ಯಕ್ಕಾಗಿ ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆ ಅನುಷ್ಠಾನಕ್ಕೆ ತಂದಿದೆ. ತಾಯಂದಿರು ಇದರ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.
ಡಾ.ಶಿವಾನಂದ ಮಹಾಸ್ವಾಮೀಜಿ, ಜಿಪಂ ಉಪಾಧ್ಯಕ್ಷ ಡಾ.ಪ್ರಕಾಶ ಪಾಟೀಲ್ ಮಾತನಾಡಿದರು. ಗುರುಬಸವೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಾಯಗಾಂವದ ಶ್ರೀ ಶಿವಾನಂದ ಸ್ವಾಮೀಜಿ, ಗ್ರಾಪಂ ಅಧ್ಯಕ್ಷೆ ಮಂಗಲಾ ಡೋಣಗಾಂವಕರ್, ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಪ್ರಮುಖರಾದ ಕಿರಣ ಖಂಡ್ರೆ, ಓಂಪ್ರಕಾಶ ರೊಟ್ಟೆ ಉಪಸ್ಥಿತರಿದ್ದರು. ಡಾ.ಶಿವಲೀಲಾ ಮಠಪತಿ ಸ್ವಾಗತಿಸಿದರು. ಶಿವಶಂಕರ ಟೋಕರೆ ನಿರೂಪಣೆ ಮಾಡಿದರು. ತಾಲೂಕಿನ ಎಲ್ಲ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.

ದೇವರನ್ನು ಹುಡುಕಬೇಕಿಲ್ಲ: ಯಾರೂ ದೇವರನ್ನು ಹುಡುಕಿಕೊಂಡು ಯಾವುದೇ ಗುಡಿ ಗುಂಡಾರಕ್ಕೆ ಹೋಗುವ ಅಗತ್ಯವಿಲ್ಲ. ಇಷ್ಟಲಿಂಗ ಪೂಜಿಸಿದ್ದರೆ ಸಾಕು, ಪರಮಾತ್ಮ ತಾನಾಗಿಯೇ ಕಾಣುತ್ತಾನೆ ಎಂದು ಡಾ.ಗಂಗಾಂಬಿಕಾ ತಾಯಿ ನುಡಿದರು. ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಅವರು, ಧರ್ಮ ಎಂಬ ಪದ ಆದಿ ಕಾಲದಿಂದ ಬಂದಿದೆ. ಇದರಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷ ನಾಲ್ಕು ಪದ ಸೇರಿವೆ. ಧರ್ಮ ಮಾರ್ಗದಲ್ಲಿ ನಡೆದರೆ ಏನು ಬೇಕಾದರೂ ಸಾಧಿಸಬಹುದು. ಧರ್ಮ ಮಾರ್ಗದಿಂದ ಹಣ ಸಂಪಾದಿಸಬೇಕೆ ವಿನಃ ಅನ್ಯ ಮಾರ್ಗದಿಂದಲ್ಲ ಎಂದರು. ಅಧ್ಯಾತ್ಮ ಸಾಧನೆ ಎಂದರೆ ನಾವು ಎಲ್ಲಿಂದ ಬಂದಿದ್ದೇವೋ ಅಲ್ಲಿಗೆ ಹೋಗುವುದೇ ಅಧ್ಯಾತ್ಮ ಜೀವನ. ಪರಮಾತ್ಮನ ಶಕ್ತಿ ಪಡೆಯಬೇಕಾದರೆ ಇಷ್ಟಲಿಂಗ ಪೂಜೆ ಮಾಡಬೇಕು ಎಂದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...