More

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಟಿ.ಎ. ಶರವಣ ಒತ್ತಾಯ

    ಬೆಂಗಳೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಇದೀಗ ಹೆಸರಿನ ಕಿತ್ತಾಟಕ್ಕೆ ಒಳಗಾಗುವ ಲಕ್ಷಣಗಳು ಗೋಚರಿಸಿದೆ. ಈ ಹೆದ್ದಾರಿಗೆ ಮೈಸೂರು ರಾಜರ ಹೆಸರನ್ನು ಇಡಬೇಕು ಎಂಬ ಬಗ್ಗೆ ಈಗಾಗಲೇ ಕೆಲವರು ಪ್ರಸ್ತಾಪಿಸಿದ್ದು, ಅದರ ಬೆನ್ನಿಗೇ ದೇವೇಗೌಡರ ಹೆಸರಿಡಬೇಕು ಎಂಬ ಒತ್ತಾಯವೊಂದು ಕೇಳಿಬಂದಿದೆ. ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.

    ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ವೀಕ್ಷಣೆಗೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಧಾವಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದಾದರೆ ಈ ಮಹಾರಸ್ತೆಗೆ ಮಾಜಿ ಪ್ರಧಾಣಿ ದೇವೇಗೌಡರ ಹೆಸರಿಡಿ ಎಂದು ಶರವಣ ಆಗ್ರಹಿಸಿದ್ದಾರೆ.

    ಈ ರಸ್ತೆ ಹಾದು ಹೋಗುವ ಉದ್ದಗಲಕ್ಕೂ ಇರುವ ಮಣ್ಣಿನ ಕಣಕಣದಲ್ಲೂ, ರೈತರ ಬೆವರ ಹನಿ ಶ್ರಮದಲ್ಲಿ ದೇವೇಗೌಡರ ಹೆಸರು ಅಭಿಮಾನದಿಂದ ರಾರಾಜಿಸುತ್ತಿದೆ. ದೇವೇಗೌಡರು ಈ ನೆಲದ ಸಾರ್ವಭೌಮ ರಾಜಕಾರಣಿ ಮತ್ತು ಅಜಾತಶತ್ರು. ಇದನ್ನು ಮನಗಂಡು ಈ ದಿಗ್ಗಜ ನಾಯಕರನ್ನು ಗೌರವಿಸುವ ದೃಷ್ಟಿಯಿಂದ ಈ ದಶಪಥ ಹೆದ್ದಾರಿಗೆ ಅವರ ಹೆಸರಿಡುವುದು ಸೂಕ್ತ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಚಹಾದಲ್ಲಿ ಸಕ್ಕರೆ ಕಡಿಮೆ ಇದ್ದಿದ್ದಕ್ಕೆ ಹೋಟೆಲ್​ ಮಾಲೀಕನಿಗೇ ಚಾಕು ಚುಚ್ಚಿದ!

    ಪ್ರಧಾನಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಪ್ರಪ್ರಥಮ ಕನ್ನಡಿಗ ಎನ್ನುವ ಹಿರಿಮ ದೇವೇಗೌಡರದ್ದು, ಕರ್ನಾಟಕದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಕೊಂಡೊಯ್ದ ಹಮ್ಮೆ. ದಶಪಥ ಹೆದ್ದಾರಿಗೆ ಅವರ ಹೆಸರಿಟ್ಟರೆ ಕೇಂದ್ರ ಸರ್ಕಾರಕ್ಕೂ ಹೆಸರು ಬರುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಪಕ್ಷ ರಾಜಕಾರಣ ಬದಿಗಿಟ್ಟು, ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರು ಇಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶರವಣ ಪತ್ರ ಬರೆದು ಒತ್ತಾಯಿಸಿದ್ದಾರೆ.

    ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

    ಆಸ್ಪತ್ರೆಯಲ್ಲಿದ್ದ ವಿವಾಹಿತ ಪ್ರೇಯಸಿಯನ್ನು ತಡರಾತ್ರಿಯಲ್ಲಿ ಅಪ್ಪಿಕೊಂಡವ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳ್ಕೊಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts