More

    ಶರಾವತಿ ಸಂತ್ರಸ್ತರ ಜಮೀನಿಗೆ ಹಕ್ಕುಪತ್ರಕ್ಕೆ ಪ್ರತಿಭಟನೆ

    ಶಿವಮೊಗ್ಗ: ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಕಳೆದುಕೊಂಡು 60 ವರ್ಷವಾದರೂ ಹಕ್ಕುಪತ್ರ ನೀಡಿಲ್ಲವೆಂದು ಆರೋಪಿಸಿ ಮುಳುಗಡೆ ಸಂತ್ರಸ್ತರು ಸೋಮವಾರ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಕಾಗೋಡು ತಿಮ್ಮಪ್ಪ ಕಂದಾಯ ಸಚಿವರಾಗಿದ್ದಾಗ ಅರಣ್ಯ ಇಲಾಖೆಯ 9,600 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿ ಇಲಾಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಆರಂಭವಾಗಿತ್ತು. ಆದರೆ, ಕೆಲ ವಿರೋಧಿಗಳು ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರಿಂದ ಕಾನೂನು ಬಾಹಿರವೆಂಬ ತೀರ್ಪು ಹೊರಬಿದ್ದಿದೆ. ತೀರ್ಪು ಬಂದು 6 ತಿಂಗಳಾದರೂ ಮೇಲ್ಮನವಿ ಸಲ್ಲಿಸಿಲ್ಲ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
    ರಾಜ್ಯ ಸರ್ಕಾರ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತಕ್ಷಣವೇ ಮೇಲ್ಮನವಿ ಸಲ್ಲಿಸಬೇಕು. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಸಂತ್ರಸ್ತರ ಸಭೆಯಲ್ಲಿ ಕೈಗೊಂಡಿದ್ದ ನಡಾವಳಿ ಅನುಷ್ಟಾನಗೊಳಿಸಬೇಕು. ಕೆಲವರು ಮುಳುಗಡೆ ರೈತರನ್ನು ನಕಲಿ ಪರಿಸರವಾದಿಗಳೆಂದು ಬೆದರಿಕೆ ಹಾಕುತ್ತಿರುವುದು ತಪ್ಪಬೇಕು. ಕೂಡಲೆ ವಾಸದ ಮನೆ ಮತ್ತು ಜಮೀನಿನ ಮಾಲೀಕತ್ವ ನೀಡಬೇಕೆಂದು ಆಗ್ರಹಿಸಿದರು. ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್, ಪ್ರಮುಖರಾದ ಎಂ.ಬಿ.ರಾಜಪ್ಪ, ಷಣ್ಮುಖ, ಧರ್ಮರಾಜ್, ವೆಂಕಟೇಶ್, ಕೃಷ್ಣಮೂರ್ತಿ, ಶಿವಣ್ಣ ಸೇರಿ ನೂರಾರು ರೈತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts