More

    ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆ ಟೆಂಡರ್ ಪ್ರಕ್ರಿಯೆ ಎಲ್ ಆ್ಯಂಡ್ ಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು : ರಾಜ್ಯದ ವಿದ್ಯುತ್ ಸಮಸ್ಯೆ ನೀಗಲು ಸರ್ಕಾರವು 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲು ಮುಂದಾಗಿರುವ ‘ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಗೆ’ ಸಂಬಂಧಿಸಿರುವ ಟೆಂಡರ್ ಪ್ರಕ್ರಿಯೆಯನ್ನು ಹೈಕೋರ್ಟ್ ಊರ್ಜಿತಗೊಳಿಸಿದೆ.

    ಯೋಜನೆಗೆ ಕರೆಯಲಾಗಿದ್ದ ಟೆಂಡರ್ ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದ ಆದೇಶ ರದ್ದುಪಡಿಸಬೇಕು ಮತ್ತು ಟೆಂಡರ್ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಎಲ್ ಆ್ಯಂಡ್ ಟಿ ಕಂಪನಿಯು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದೆ.

    ಟೆಂಡರ್‌ಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಕೇವಲ 21 ದಿನ ನೀಡಲಾಗುತ್ತಿದೆ. ಕೆಪಿಸಿಎಲ್ನಿಂದ ಕೆಲ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ರೂಪಿಸಲಾಗಿದೆ ಅರ್ಜಿದಾರರು ವಾದ ಮಂಡಿಸಿದ್ದರು.

    ಅಲ್ಲದೆ, 5 ವರ್ಷ ಯೋಜನಾ ಅವಧಿಯ 8,000 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗೆ ಕೇವಲ 21 ದಿನಗಳ ಟೆಂಡರ್ ಅಖೈರುಗೊಳಿಸಲಾಗುತ್ತಿದೆ. ನೀತಿಸಂಹಿತೆಯಿಂದ ಪಾರಾಗಲು ತರಾತುರಿಯಲ್ಲಿ ಟೆಂಡರ್ ಕರೆಯಲಾಗಿದೆ. ತಮಗೆ ಟೆಂಡರ್ ಸಲ್ಲಿಕೆಗೆ 90 ದಿನ ಬೇಕಿತ್ತು. ಹೀಗಾಗಿ ಟೆಂಡರ್ ಅನೂರ್ಜಿತಗೊಳಿಸಬೇಕು ಎಂದು ಕೋರಿದ್ದರು.

    30 ದಿನಗಳ ಟೆಂಡರ್ ಅವಧಿಯನ್ನು ಕಡಿತಗೊಳಿಸಲು ಪ್ರಾಧಿಕಾರಕ್ಕೆ ಅಧಿಕಾರವಿದೆ. ಈಗಾಗಲೇ ಬಿಡ್ ತೆರೆಯಲಾಗಿದ್ದು, ಲೆಟರ್‌ಆ್ ಅವಾರ್ಡ್ ಕೂಡ ನೀಡಲಾಗಿದೆ. ಪ್ರಕ್ರಿಯೆಗೆ ತಡೆ ನೀಡಬಾರದು ಎಂದು ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು.
    ಟೆಂಡರ್ ಪ್ರಕ್ರಿಯೆಯನ್ನು ಹೈಕೋರ್ಟ್ ಊರ್ಜಿತಗೊಳಿಸುವ ಮೂಲಕ ಸರ್ಕಾರದ ಆದೇಶ ಎತ್ತಿ ಹಿಡಿದಿದೆ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ. ಪ್ರಸ್ತುತ ಟೆಂಡರ್ ಅನ್ನು ಕಡಿಮೆ ದರ ನಮೂದಿಸಿದ್ದ ಮೆ. ಮೇಘ ಇಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಪಡೆದುಕೊಂಡಿದೆ.

    ಬಾಕ್ಸ್
    ಆದೇಶಕಿಲ್ಲ ತಡೆ….
    ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಹೈಕೋರ್ಟ್ ತಿರಸ್ಕರಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts