More

    ವಸಂತ್ ಆಸ್ನೋಟಿಕರ್ ಕೊಲೆ ಪ್ರಕರಣ ಶಾರ್ಪ್ ಶೂಟರ್ ರಾಜನ್ ಗೆ ಜೀವಾವಧಿ ಶಿಕ್ಷೆ ಕಾಯಂ

    ಬೆಂಗಳೂರು: ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

    ಪ್ರಕರಣದ ಆರನೇ ಆರೋಪಿಯಾಗಿದ್ದ ಮುಂಬೈ ಅಂಧೇರಿ ಮೂಲದ ಸಂಜಯ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ ಧಾರವಾಠ ಪೀಠ ಈ ಆದೇಶ ನೀಡಿದೆ.

    ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಘಟನೆ ನಡೆದ ದಿನದಂದು ಆರೋಪಿ ಕಾರವಾದಲ್ಲಿದ್ದರು ಎಂಬುದಾಗಿ ತನಿಖಾಧಿಕಾರಿಗಳು ತಪ್ಪಾಗಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಹೊಸದಾಗಿ ಆರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿದ್ದಾರೆ. ಅಲ್ಲದೆ, ಘಟನೆ ನಡೆದ ಎರಡು ವರ್ಷಗಳ ಬಳಿಕ ಸಾಕ್ಷ್ಯಗಳ ಪೆರೆಡ್ ನಡೆಸಿದ್ದಾರೆ. ಸಾಕ್ಷಿಗಳಿಗೆ ತರಬೇತಿ ನೀಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ವಿವರಿಸಿದ್ದರು.

    ತನಿಖಾಧಿಕಾರಿಗಳ ಪರ ವಕೀಲರು, ಪುನಃ ಹೊಸದಾಗಿ ತನಿಖೆ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿದ್ದರೂ, ಯಾವುದೇ ದೋಷಗಳನ್ನು ಸರಿಪಡಿಸುವುದಕ್ಕೆ ಅವಕಾಶವಿರುವುದಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.

    ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಘಟನೆ ಸಂಬಂಧ ಹಲವು ಪ್ರತ್ಯಕ್ಷ ಸಾಕ್ಷ್ಯಿಗಳು ಲಭ್ಯವಿದ್ದು, ಮೇಲ್ಮನವಿದಾರರ ಕೃತ್ಯವನ್ನು ಗುರುತಿಸಿದ್ದಾರೆ. ವಿಚಾರಣಾ ನ್ಯಾಯಾಲಯಕ್ಕೆ ಸಾಕ್ಷ್ಯ ಸಂಬಂಧ ಹೇಳಿಕೆಗಳನ್ನು ನೀಡಿದ್ದಾರೆ. ಕೆಲವು ಸಾಕ್ಷ್ಯಧಾರಗಳಲ್ಲಿ ವಿರೋಧಾಭಾಸವಿರಬಹುದು. ಆದರೆ, ಅದಕ್ಕೆಲ್ಲ ಖಚಿತ ಆಧಾರಗಳಿವೆ. ಪ್ರತ್ಯಕ್ಷ ಸಾಕ್ಷಿಗಳು ಆರೋಪಕ್ಕೆ ಪೂರಕವಾಗಿದ್ದಾಗ ಇತರ ಸಾಕ್ಷಿಗಳನ್ನು ನಂಬ ಬೇಕಾಗುತ್ತದೆ ಎಂದು ತಿಳಿಸಿದೆ.

    ಅಲ್ಲದೆ, ಗುಂಡಿನ ದಾಳಿ ಅಸಾಮಾನ್ಯವಾಗಿತ್ತು. ಕಾರವಾದಂತಹ ನಗರಗಳಲ್ಲಿ ಚಲನಚಿತ್ರಗಳಲ್ಲಿಯೂ ಕಾಣದಂತಹ ಘಟನೆ ಸಂಭವಿಸಿದ್ದು, ಪ್ರತ್ಯಕ್ಷ ಸಾಕ್ಷಿಗಳಿಗೆ ಘಟನೆ ನೆನಪಿನಲ್ಲಿ ಉಳಿಯುವಂತಾಗಿದೆ ಎಂದು ಪೀಠ ಹೇಳಿದೆ.

    ಸಾಕ್ಷಿದಾರರು ಪಾಟಿಸವಾಲು ಸಂದರ್ಭದಲ್ಲಿ ನೀಡಿರುವ ಹೇಳಿಕೆ ನಂಬಲಾರ್ಹವಲ್ಲ ಎಂಬುದಕ್ಕೆ ಸಾಧ್ಯವೇ ಇಲ್ಲ. ಕಾನೂನಿನಲ್ಲಿ ಈ ಎಲ್ಲ ವಾಸ್ತವಿಕ ಅಂಶಗಳನ್ನು ಪರಿಶೀಲನೆ ನಡೆಸಿದಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಕಾನೂನು ಬಾಹಿರ ಹಾಗೂ ದೋಷದಿಂದ ಕೂಡಿದೆ ಎಂದು ಹೇಳಲು ಯಾವುದೇ ಆಧಾರಗಳಿಲ್ಲ. ಆದ ಕಾರಣದ ಮೇಲ್ಮನವಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts