

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಅವರ ಪುತ್ರ ಶಶಾಂಕ ಹೆಗಡೆ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಅಂಗವಾಗಿ ನೀಡಲಾಗುವ ವಿದ್ಯಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.27ರಿಂದ ಮೂರು ದಿನಗಳ ಕಾಲ ನಡೆಯುವ ಹವ್ಯಕ ಸಮ್ಮೇಳನದಲ್ಲಿ ಈ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಲಿದೆ. ಮಣಿಪಾಲ ವಿ.ವಿ.ಯಿಂದ ಎಂ.ಟೆಕ್ ಪದವಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿರುವ ಶಶಾಂಕ ಇಂಗ್ಲೆಂಡಿನಲ್ಲಿ ಒಂದು ವರ್ಷದ ಎಂಎಸ್ಸಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಮಣಿಪಾಲ ವಿವಿಯಿಂದ ಡಬಲ್ ಡಿಗ್ರಿ ಪ್ರಾಜೆಕ್ಟ್‌ಗೆ ಆಯ್ಕೆಯಾಗಿದ್ದ ಅವರು, ಇಂಗ್ಲೆಂಡಿನ ಕ್ರಾನ್ಫೀಲ್ಡ್ ವಿ.ವಿ.ಯಲ್ಲಿ ‘ಕಂಪ್ಯೂಟೇಶನಲ್ ಫ್ಲ್ಯೂಯಿಡ್ ಡೈನಾಮಿಕ್ಸ್’ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅತ್ಯುತ್ತಮ ಗ್ರೇಡ್‌ನೊಂದಿಗೆ ಪೂರ್ಣಗೊಳಿಸಿದ್ದಾರೆ.