ನವದೆಹಲಿ: ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸುತ್ತಿದ್ದಂತೆ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತಿವಾಗುತ್ತಿದ್ದು, ಹಲವರು ನೂತನ ಕೋಚ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಸದಸ್ಯರ ವಿರುದ್ಧ ಕಿಡಿಕಾರಿದ್ದಾರೆ.

ಇತ್ತೀಚಿಗೆ ಜಿಂಬಾಬ್ವೆ ವಿರುದ್ಧ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಶತಕ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆ ಬಿಸಿಸಿಐ ಆಯ್ಕೆ ಮಾಡಿಲ್ಲ. ಈ ಬಗ್ಗೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವರು ಕಿಡಿಕಾರಿದ್ದು, ಈ ಬಗ್ಗೆ ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್ ಸಂಸದ ಶಶಿ ತರೂರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
Interesting squad selection for India’s tour of Sri Lanka later this month. @IamSanjuSamson, who hit a century in his last ODI, has not been picked for ODIs, while @IamAbhiSharma4, who hit a T20I century in the #INDvZIM series, has not been picked at all. Rarely has success in… pic.twitter.com/PJU5JxSOx2
— Shashi Tharoor (@ShashiTharoor) July 18, 2024
ಇದನ್ನೂ ಓದಿ: ಲಂಡನ್ನ ಬೀದಿಯಲ್ಲಿ ಪತ್ನಿ-ಮಗನೊಂದಿಗೆ ವಿರಾಟ್ ಶಾಪಿಂಗ್; ವಿಡಿಯೋ ವೈರಲ್
ಈ ತಿಂಗಲಾಂತ್ಯದಲ್ಲಿ ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆ ಬಹಳ ಕುತುಹಲಕಾರಿಯಾಗಿದೆ. ಇತ್ತೀಚಿನ ಸರಣಿಯಲ್ಲಿ ಶತಕ ಬಾರಿಸಿದ್ದ ಆಟಗಾರರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಇಂತಹ ಪ್ರತಿಭಾನ್ವಿತರು ಆಯ್ಕೆಗಾರರ ಕಣ್ಣಿಗೆ ಕಾಣಲಿಲ್ವಾ ಎಂಬುದು ನನ್ನ ಪ್ರಶ್ನೆಯಾಗಿದೆ. ಹೇಗಿದ್ದರೂ ತಂಡಕ್ಕೆ ಶುಭವಾಗಲಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆ ಟಿ20 ಮಾದರಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ವಹಿಸಲಾಗಿದೆ. ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಈ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ರೋಹಿತ್ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ.