ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮದ ಶ್ರೀ ಶಾಸ್ತ ಈಶ್ವರ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಮಹೋತ್ಸವ ಬುಧವಾರ ಸಂಪನ್ನಗೊಂಡಿತು.
ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಶಾಸ್ತ ಈಶ್ವರ ದೇವರ ಬಲಿ, ಗಣಪತಿ ಹೋಮ, ಅಲಂಕಾರ, ಪೂಜೆ, ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, ಪೂಜೆ, ವಿಷ್ಣುಮೂರ್ತಿ ದೈವ ನೆಲೆ, ಅಭಿಷೇಕ, ಪೂಜೆ ಜರುಗಿತು. ಮಧ್ಯಾಹ್ನ ನೆನಪು ಬಲಿ ಬಳಿಕ ಮಹಾಪೂಜೆ ನೆರವೇರಿಸಿ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಮಾಡಲಾಯಿತು. ಸಂಜೆ ಆವೃತ ಸ್ನಾನ ಜರುಗಿತು. ವಿವಿಧ ನೃತ್ಯ ಸಂಪ್ರೊಕ್ಷಣೆಯೊಂದಿಗೆ ದೈವಿಕ ವಿಧಿ ವಿಧಾನಗಳು ಜರುಗಿದವು. ಬಳಿಕ ವಿಷ್ಣುಮೂರ್ತಿ ದೇವರ ತಾಯತ ತೆರೆ ಹಾಗೂ ಮೇಲೇರಿಗೆ ಅಗ್ನಿ ಸ್ಪರ್ಶ ನೆರವೇರಿಸಲಾಯಿತು. ಮಂಗಳವಾರ ವಿಷ್ಣುಮೂರ್ತಿ ದೈವದ ಕೊಳ ಜರುಗಿತು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಪ್ರಧಾನ ಅರ್ಚಕ ಜಯರಾಮ ತಂತ್ರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಮೂರು ವರ್ಷಗಳ ಹಿಂದೆ ದೇವಾಲಯ ಜೀರ್ಣೋದ್ಧಾರಗೊಂಡು ಮರು ಪ್ರತಿಷ್ಠಾಪನೆಗೊಳ್ಳುವುದರ ಮೂಲಕ ಐತಿಹಾಸಿಕ ಹಿನ್ನೆಲೆಯುಳ್ಳ ದೇವಾಲಯವಾಗಿ ರೂಪುಗೊಂಡಿದೆ. ಗ್ರಾಮದ ದೇವ ತಕ್ಕ ನೆರವಂಡ ಸಂಜಯ್ ಪೂಣಚ್ಚ, ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ, ದೇವಾಲಯ ಸಮಿತಿ ಸದಸ್ಯರು ಸೇರಿದಂತೆ ಭಕ್ತರು ಹಾಜರಿದ್ದರು.
ಶಾಸ್ತ ಈಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸಂಪನ್ನ

You Might Also Like
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…