

ಮಂಗಳೂರು : ಬೆಂಗಳೂರಿನಲ್ಲಿ ನಡೆದ ಸಿಬಿಎಸ್‌ಇ ಪ್ರಾದೇಶಿಕ ಮಟ್ಟದ ವಿಜ್ಞಾನ ಮಾದರಿ 2024 ಇನ್ನೋವೇಟಿವ್ ಇಂಟರನ್ಯಾಶನಲ್ ಸ್ಕೂಲ್ ಸ್ಪರ್ಧೆಯಲ್ಲಿ ಶಕ್ತಿನಗರದ ಶಕ್ತಿ ವಸತಿ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಶಾಸ್ತಾ ವಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ನಡೆದ ವಿದ್ಯಾ ಭಾರತಿಯ ರಾಷ್ಟ್ರಮಟ್ಟದ ಅಖಿಲ ಭಾರತ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಪಡೆದಿದ್ದರು. 2024 ರ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶಾಸ್ತ ವಿ ಬ್ಲಾಕ್ ಬೆಲ್ಟ್ ವಿಭಾಗದ ಕಟಾದಲ್ಲಿ ಚಿನ್ನದ ಪದಕ ಮತ್ತು ಕುಮಿಟೆಯಲ್ಲಿ ಕಂಚಿನ ಪದಕ ಗೆದ್ದಿದ್ದರು.
ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ. , ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.