

ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 155ನೇ ಜನ್ಮದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಶ್ರಾವಣಿ ಎಂ. ನಾಯ್ಕ ಹಾಗೂ ಅವ್ನಿಕಾ ಗಾಂಧೀಜಿ ಮತ್ತು ಶಾಸ್ತ್ರಿ ಜಯಂತಿ ಕುರಿತು ಅನಿಸಿಕೆ ಹಂಚಿಕೊಂಡರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ ಹಾಗೂ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಗಾಂಧೀಜಿ ಹಾಗೂ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಸರ್ವಧರ್ಮ ಪ್ರಾರ್ಥನೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸುನೀತಾ ಸ್ವಾಗತಿಸಿದರು. ಅಶ್ವಿನಿ ವಂದಿಸಿದರು. ಪದ್ಮಾವತಿ ಕಾರ್ಯಕ್ರಮ ನಿರೂಪಿಸಿದರು. ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ ಹಾಗೂ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.