ಗೋಳ್ತಮಜಲಲ್ಲಿ ಶತರುದ್ರಾಭಿಷೇಕ

Btw_Rudra
Published on

ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಲಕ್ಷದೀಪೋತ್ಸವದ ಪ್ರಯುಕ್ತ ಸೋಮವಾರ ದೇವರಿಗೆ ಶತರುದ್ರಾಭಿಷೇಕ ನಡೆಯಿತು.

ಬೆಳಗ್ಗೆ ಗಣಹೋಮ, ಶತರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸೋಮವಾರ ಬೆಳಗ್ಗೆ 6.30ರಿಂದ ಮಂಗಳವಾರ ಬೆಳಗ್ಗೆ 6.30ರವರೆಗೆ ಏಕಾಹ ಭಜನೆ ನಡೆಯಿತು. ವಿವಿಧ ಭಜನಾ ಮಂಡಳಿಗಳು ಭಾಗವಹಿಸಿ ಭಜನಾ ಸಂಕೀರ್ತನೆ ನಡೆಸಿಕೊಟ್ಟವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net