More

    ‘ಸುಷ್ಮಾ ಸ್ವರಾಜ್​ ರಾಜತಾಂತ್ರಿಕತೆಯ ಬಹುದೊಡ್ಡ ಶಕ್ತಿಯಾಗಿದ್ದರು’: ಮಾಲ್ಡೀವ್ಸ್​ ಸಚಿವ ಅಬ್ದುಲ್ ಶಾಹೀದ್​

    ನವದೆಹಲಿ: ಸುಷ್ಮಾ ಸ್ವರಾಜ್​ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡ ಮೇಲೆ ಅದರ ಕಾರ್ಯವೈಖರಿಯೇ ಬದಲಾಗಿತ್ತು. ಆ ಇಲಾಖೆಗೆ ಮಾನವೀಯತೆಯ ಸ್ಪರ್ಶ ಕೊಟ್ಟವರು ಅವರು. ಜಗತ್ತಿನ ವಿವಿಧ ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದರು.

    ಕಳೆದ ವರ್ಷ ಸುಷ್ಮಾ ಸ್ವರಾಜ್​ ಅವರು ಮೃತಪಟ್ಟಾಗ ಪಾಕಿಸ್ತಾನದ ವಿದೇಶಾಂಗ ಸಚಿವರಿಂದ ಹಿಡಿದು ಹಲವು ರಾಷ್ಟ್ರಗಳ ಪ್ರಮುಖರು, ಭಾರತದಲ್ಲಿರುವ ವಿದೇಶಿ ರಾಯಭಾರಿಗಳು ಸಂತಾಪ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದರು. ಸುಷ್ಮಾ ಸ್ವರಾಜ್​ ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದರು. ಇದನ್ನೂ ಓದಿ: ಸುಷ್ಮಾ ಸ್ವರಾಜ್​ ಮೊದಲ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪ್ರಧಾನಿ ಮೋದಿ…

    ಸುಷ್ಮಾ ಸ್ವರಾಜ್​ ಮೃತಪಟ್ಟು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಮಾಲ್ಡೀವ್ಸ್​ ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ಲಾ ಶಾಹೀದ್​ ಅವರು ಟ್ವೀಟ್​ ಮೂಲಕ ಸುಷ್ಮಾ ಸ್ವರಾಜ್​​ರನ್ನು ನೆನಪಿಸಿಕೊಂಡಿದ್ದಾರೆ. ವಿಡಿಯೋವೊಂದನ್ನು ಶೇರ್​ ಮಾಡಿಕೊಂಡ ಅವರು, ಭಾರತದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರಿಗೆ ಗೌರವ ಅರ್ಪಿಸುತ್ತಿದ್ದೇನೆ. ಅವರು ನನ್ನ ಉತ್ತಮ ಸ್ನೇಹಿತೆಯಾಗಿದ್ದರು. ಹಾಗೇ ರಾಜತಾಂತ್ರಿಕತೆಯಲ್ಲಿ ಮಹಾನ್​ ಶಕ್ತಿಯಾಗಿದ್ದರು. ಭಾರತ-ಮಾಲ್ಡೀವ್ಸ್​ ನಡುವಿನ ಪಾಲುದಾರಿಕೆ, ಸಂಬಂಧವನ್ನು ಬಲಪಡಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಶ್ಲಾಘನೀಯ ಪ್ರಯತ್ನಗಳನ್ನು ಮಾಡಿದ್ದರು ಎಂದು ಅಬ್ದುಲ್ಲಾ ಶಾಹೀದ್​ ಹೇಳಿದ್ದಾರೆ. (ಏಜೆನ್ಸೀಸ್​)

    ಹೊಸ ಶಿಕ್ಷಣ ನೀತಿ ಹೇಗಿರಲಿದೆ? ಪ್ರಧಾನಿಯಿಂದ ನಾಳೆ ಸಂಪೂರ್ಣ ವಿವರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts