ಕುರಿ, ಮೇಕೆ ಸಾಕಣೆಗೆ ಅರ್ಜಿ ಆಹ್ವಾನ

Application-1-1280x720
Published on

ಹೊಸಪೇಟೆ: ಪ್ರಸಕ್ತ ಸಾಲಿನಲ್ಲಿ ಕುರಿ, ಮೇಕೆ ಸಾಕಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕುರಿ ಮತ್ತು ಮೇಕೆ(6+1)ನೀಡಲಾಗುತ್ತದೆ.

ತಾಲೂಕು, ಹೋಬಳಿ ಮಟ್ಟದ ಕುರಿಗಾರರ ಸಹಕಾರ ಸಂಘದ ಸದಸ್ಯರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ,

ಬ್ಯಾಂಕ್ ಖಾತೆ ಪ್ರತಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್ ಝೆರಾಕ್ಸ್ ಪ್ರತಿ ಜತೆಗೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಅರ್ಜಿಯನ್ನು ಜು.28ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net