More

    ಕುರುಬರಿಗೆ ಸೂಕ್ತ ಸ್ಥಾನಮಾನ ನೀಡಿ

    ಗೋಕಾಕ: ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ದಶಕ ಗತಿಸಿದರೂ ಕುರುಬ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೆ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು.

    ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಗುರುವಾರ ಕುರುಬರ ಎಸ್‌ಟಿ ಹೋರಾಟ ಸಮಿತಿ, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.

    ಹೋರಾಟ ಸಮಿತಿಯ ಖಜಾಂಚಿ, ಸಚಿವ ಈಶ್ವರಪ್ಪ ಅವರ ಪುತ್ರ ಕೆ.ಈ.ಕಾಂತೇಶ ಮಾತನಾಡಿ, ಸರ್ಕಾರದ ಸೌಲಭ್ಯ ಪಡೆಯಲು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಪಕ್ಷಾತೀತವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

    ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ನ.29ರಂದು ಬಾಗಲಕೋಟೆಯಲ್ಲಿ ಆಯೋಜಿಸಿರುವ ವಿಭಾಗಮಟ್ಟದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಜ.15 ರಂದು ಕಾಗಿನೆಲೆ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡು ಪೆ.7 ರಂದು ಬೆಂಗಳೂರಿನಲ್ಲಿ 10 ಲಕ್ಷ ಜನರಿಂದ ಜನರನ್ನು ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.

    ಕೌಲಗುಡ್ಡದ ಅಮರೇಶ್ವರ ಮಹಾರಾಜರು ಮತ್ತು ಜಂಬಗಿಯ ಸುರೇಶ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಸುಬ್ಬಣ್ಣ ಮೈಸೂರು, ಕೆ.ಬಿ.ಶಾಂತಪ್ಪ, ವೆಂಕಟೇಶಮೂರ್ತಿ, ಟಿ.ಬಿ.ಬೆಳಗಾವಿ, ದೊಡ್ಡಯ್ಯ ಆನೆಕಲ್, ಸಿದ್ದಲಿಂಗ ದಳವಾಯಿ, ಮಡ್ಡೆಪ್ಪ ತೋಳಿನವರ, ಲಕ್ಷ್ಮಣ ಮುಸಗುಪ್ಪಿ, ಪ್ರಕಾಶ ಡಂಗ, ಶಿವಪುತ್ರ, ಯಲ್ಲಪ್ಪ ಕುರುಬರ, ಸುರೇಶ ಮಾಯಣ್ಣವರ, ಎಚ್.ಎಸ್.ನಸಲಾಪುರೆ, ಭಗವಂತ ಬಂತೆ, ವಿನಾಯಕ, ಡಿ.ಡಿ.ತೋಪ್ರೋಟಿ, ಮಾರುತಿ ಮರಡಿ, ಮಹಾದೇವ, ಎಸ್.ಕೆ. ಖಜ್ಜಣ್ಣವರ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts