ಕುರಿಗಾಹಿಗಳಿಗೆ ಅಗತ್ಯ ಆರ್ಥಿಕ ನೆರವು ನೀಡಲು ಆಗ್ರಹ

blank

ಬೆಳಗಾವಿ: ಶೂನ್ಯ ಬಡ್ಡಿ ದರದಲ್ಲಿ ಸಾಲ, ಮೃತ ಕುರಿಗಳಿಗೆ ಪರಿಹಾರ ಸೇರಿದಂತೆ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸೋಮವಾರ ನಗರದ ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಿಲ್ಲಾ ಕುರಿಗಾರರು ಮತ್ತು ಕುರಿ ಸಾಕಣಿಕೆದಾರರ ಸಹಕಾರ ಸಂಘಗಳ ನೇತೃತ್ವದಲ್ಲಿ ಕುರಿಗಾರರು ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕುರಿಗಾರರಿಗೆ ಕುರಿ ಮೇಯಿಸಲು ಸ್ವಂತ ಜಮೀನು ಇಲ್ಲದಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶ ಅವಲಂಬಿಸಬೇಕಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳು ನಾಶವಾಗದಂತೆ ಕ್ರಮ ವಹಿಸಬೇಕು. ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅನುಮತಿ ನೀಡಬೇಕು. ಕುರಿಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪದಾಧಿಕಾರಿಗಳು ಕೋರಿದರು.

ಹಿಂದಿನ ಸರ್ಕಾರಗಳು ಆಕಸ್ಮಿಕವಾಗಿ ಮರಣ ಹೊಂದಿ ಕುರಿ, ಮೇಕೆ ಹಾಗೂ ಅವುಗಳ ಮರಿಗಳಿಗೆ ಪರಿಹಾರ ನೀಡುವ ಯೋಜನೆ ಜಾರಿಗೆ ತಂದಿದ್ದವು. 3 ರಿಂದ 4 ತಿಂಗಳ ಮರಿಗಳು ಮೃತಪಟ್ಟರೆ 2,500 ಮತ್ತು 6 ತಿಂಗಳ ನಂತರ ಮೃತಪಟ್ಟ ಕುರಿ, ಮೇಕೆಗಳಿಗೆ 5,000 ರೂ. ವರೆಗೆ ಪರಿಹಾರ ನೀಡಲಾಗುತ್ತಿತ್ತು. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ.

ಹಾಗಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಸಹಕಾರ ಸಂಘಗಳ ಅಧ್ಯಕ್ಷ ಪಂಡಿತರಾವ ಚಿದ್ರಿ, ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ಶ್ರೀಶೈಲ ಪೂಜೇರ, ಬಿ.ಆರ್.ರಾಮನಗಟ್ಟಿ, ಎ.ಬಿ.ಹೆಗಡೆ ಇತರರು ಇದ್ದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…