More

    ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಜಿಲ್ಲಾ ಬೀದಿನಾಟಕ ಕಲಾವಿದರ ಮನವಿ

    ಬೆಳಗಾವಿ: ಜಾಗೃತಿಯ ಬೀದಿ ನಾಟಕಗಳನ್ನು ಶೀಘ್ರವಾಗಿ ಆರಂಭಿಸಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಬೇಕು. ಜತೆಗೆ ಬೀದಿನಾಟಕ ಅಕಾಡೆಮಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬೀದಿನಾಟಕ ಕಲಾವಿದರು ಮಂಗಳವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    40 ವರ್ಷಗಳಿಂದ ರಾಜ್ಯದ ಸುಮಾರು 4,500 ಕಲಾವಿದರನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳು ಬೀದಿನಾಟಕದ ಮೂಲಕ ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಬಳಸಿಕೊಳ್ಳುತ್ತಿದ್ದವು. ಈ ಕಲೆಯನ್ನು ಅವಲಂಬಿಸಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿದ್ದವು. ಆದರೆ, ಪ್ರಸ್ತುತ ಕೆಲವು ಇಲಾಖೆಗಳು ಬೀದಿ ನಾಟಕ ಕಾರ್ಯಕ್ರಮ ನಿಲ್ಲಿಸಿವೆ.

    ಇದರಿಂದ ಬೀದಿನಾಟಕ ಕಲಾವಿದರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಮತ್ತೆ ಬೀದಿ ನಾಟಕ ಆಯೋಜಿಸುವ ಮೂಲಕ ಕಲಾವಿದರಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು. ಭರತ ಕಲಾಚಂದ್ರ, ರಾಮಚಂದ್ರ ಕಾಂಬಳೆ, ಮಾರುತಿ ಕಾಮಗೌಡ, ಮಿಲೀಂದ್ರ ಸಂಗಣ್ಣವರ, ಪ್ರಶಾಂತ ಕಾಬಂಳೆ, ಸುಜಾತಾ ಮಗದುಮ್ಮ, ಸಾವಿತ್ರಿ ಹಳಕಲ್ಲ, ಮಾರುತಿ ಕಮತೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts