More

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್​ಗೆ ಲಾಭ

    ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಲಾಭ ಆಗಿದೆ. ಪಕ್ಷ ಸದಾ ಅವರೊಂದಿಗೆ ಇರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

    ಇಲ್ಲಿನ ಕೇಶ್ವಾಪುರದಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಮನೆಗೆ ಬುಧವಾರ ಬೆಳಗ್ಗೆ ಭೇಟಿ ನೀಡಿ, ಶೆಟ್ಟರ್ ಅವರೊಂದಿಗೆ ಅಂದಾಜು ಒಂದು ತಾಸು ಚರ್ಚೆ ನಡೆಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

    ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಿ, ಅವರೊಂದಿಗೆ ಕೆಲವು ವಿಷಯಗಳನ್ನು ರ್ಚಚಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನ ಇತ್ತು. ಅದರಂತೆ ಇಬ್ಬರೂ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗುವ ಉದ್ದೇಶದಿಂದ ಬೆಳಗಾವಿ ಮತ್ತು ಹುಬ್ಬಳ್ಳಿಗೆ ಭೇಟಿ ನೀಡಿದ್ದಾಗಿ ತಿಳಿಸಿದರು.

    ಪುಟ್ಟಣ್ಣ, ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ, ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಿಂದಾಗಿ ಕಾಂಗ್ರೆಸ್​ಗೆ ದೊಡ್ಡ ಶಕ್ತಿ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಏರಿದ್ದು, ಕಾರ್ಯಕರ್ತರು ಉತ್ಸಾಹದಲ್ಲಿ ಇದ್ದಾರೆ. ಚುನಾವಣೆ ಬಿ ಫಾಮ್ರ್ ನೀಡಿದ ನಂತರ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರೊಂದಿಗೆ ಮಾತನಾಡಲು ಆಗಿರಲಿಲ್ಲ. ಇದೀಗ ವರಿಷ್ಠರ ಸೂಚನೆ ಮೇರೆಗೆ ಇಬ್ಬರೂ ಮುಖಂಡರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದರು.

    ಹಿಂದಿನ ಸರ್ಕಾರ ಮಾಡಿದ ತಪು್ಪಗಳ ವಿರುದ್ಧ ಹೋರಾಡುತ್ತ, ಜನ ಜಾಗೃತಿ ಮೂಡಿಸುತ್ತ ಪಕ್ಷ ಸಂಘಟಿಸಿದ್ದೇವು. ಇದರ ಮಧ್ಯೆ ಶೆಟ್ಟರ್, ಸವದಿ ಕಾಂಗ್ರೆಸ್ ಸೇರ್ಪಡೆ ಮತ್ತಷ್ಟು ಲಾಭ ಆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪೂರ್ವ ನೀಡಿದ ಮಾತುಗಳನ್ನು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದರು.

    ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಇತರರು ಇದ್ದರು.

    ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ :

    ಮುಂದಿನ ದಿನಗಳಲ್ಲಿ ಯೋಗ್ಯ ಸ್ಥಾನಮಾನ ನೀಡುವ ಬಗ್ಗೆ ನಿರ್ಧರಿಸುವುದಾಗಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭರವಸೆ ನೀಡಿದ್ದಾರೆ. ನಾನಾಗಿಯೇ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.

    ಡಿ.ಕೆ. ಶಿವಕುಮಾರ ಅವರೊಂದಿಗೆ ನಡೆದ ಚರ್ಚೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ ಶೆಟ್ಟರ್, ಲೋಕಸಭೆ ಚುನಾವಣೆ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಅವರೊಂದಿಗೆ ರ್ಚಚಿಸಿದೇವು. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಕೆಲವು ಸಲಹೆಗಳನ್ನು ನೀಡಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಸಾಧನೆ ಬಗ್ಗೆ ಡಿ.ಕೆ. ಶಿವಕುಮಾರ ಸಂತಸದಿಂದ ಇದ್ದರು. ನಾನು ಕಾಂಗ್ರೆಸ್ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಲಾಭ ಆಯಿತೆಂದು ತಿಳಿಸಿದರು. ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಆದ್ಯತೆ ನೀಡುವಂತೆ ಸೂಚಿಸಿದ್ದಾರೆ ಎಂದರು.

    ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಚುನಾವಣೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ್ದಾರಷ್ಟೇ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts