More

    ಪ್ರಧಾನಿ ಮೋದಿ ಬೃಹತ್ ಸಮಾವೇಶದ ಪೂರ್ವ ಸಿದ್ಧತೆ ಪರಿಶೀಲಿಸಿದ ಶೆಟ್ಟರ್


    ಬೆಳಗಾವಿ: ನಗರದ ಹೊರವಲಯದ ಯಡಿಯೂರಪ್ಪ ಮಾರ್ಗದ ಮಾಲಿನಿಸಿಟಿಯಲ್ಲಿ ಏ.28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೃಹತ್ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತಾ ಕಾರ್ಯವನ್ನು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಶುಕ್ರವಾರ ಪರಿಶೀಲಿಸಿದರು.
     ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಏ.28ರಂದು ಮಾಲಿನಿ ಸಿಟಿ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸುವರು ಎಂದು ತಿಳಿಸಿದರು.
     ಬೆಳಗಾವಿ, ಚಿಕ್ಕೋಡಿ ಎರಡೂ ಲೋಕಸಭಾ ಕ್ಷೇತ್ರದ 18 ವಿಧಾನಸಭಾ ವ್ಯಾಪ್ತಿಯ ಪಕ್ಷದ ಮುಖಂಡರು, ಮಾಜಿ ಸಚಿವರು, ಶಾಸಕರು ಇತರರು ಪಾಲ್ಗೊಳ್ಳಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮೋದಿ ಅವರ ಸಮಾವೇಶ ಬಿಜೆಪಿಗೆ ದೊಡ್ಡ ಶಕ್ತಿ ತಂದುಕೊಡಲಿದೆ ಎಂದರು. ಸಮಾವೇಶ ಸಿದ್ಧತೆ ಭರದಿಂದ ಸಾಗಿವೆ. ಜಿಲ್ಲೆಯ ಎಲ್ಲ ಕ್ಷೇತ್ರದಿಂದ ಸಾವಿರಾರು ಜನರು ಬರುತ್ತಾರೆ ಎಂದರು.
     ದೇಶದ ಭವಿಷ್ಯ ರೂಪಿಸುವ ಚುನಾವಣೆ:
     ದೇಶದ ಅಭಿವೃದ್ಧಿ, ಭದ್ರತೆ ನೋಡಿ ಮತ ನೀಡಬೇಕು. ಲೋಕಸಭಾ ಚುನಾವಣೆ ಎಂದರೆ ದೇಶದ ಭವಿಷ್ಯ ರೂಪಿಸುವ ಚುನಾವಣೆ ಆಗಿದೆ. ನರೇಂದ್ರ ಮೋದಿ 10 ವರ್ಷ ಉತ್ತಮ ಆಡಳಿತ ನೀಡಿದ್ದಾರೆ. ಆರ್ಥಿಕತೆಯಲ್ಲಿ 14ನೇ ಸ್ಥಾನದಲ್ಲಿದ್ದ ಭಾರತವನ್ನು 5ನೇ ಸ್ಥಾನಕ್ಕೆ ತಂದಿದ್ದಾರೆ. ಆದ್ದರಿಂದ ಎಲ್ಲರೂ ಬಿಜೆಪಿ ಬೆಂಬಲಿಸುತ್ತಾರೆ. ಕಾಂಗ್ರೆಸ್‌ನವರು ಇದನ್ನು ಸಾಮಾನ್ಯ ಪಂಚಾಯಿತಿ ಚುನಾವಣೆ ಅಂದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
     ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ನೇಹಾಳ ನಡವಳಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ತನಿಖೆ ನಡಿಯುತ್ತಿರುವಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ವೈಯಕ್ತಿಕ ಘಟನೆ ಎಂದು ಹೇಳಿಕೆ ಕೊಟ್ಟಿದ್ದರು. ಘಟನೆ ನಡೆದು ಎಷ್ಟೋ ದಿನಗಳಾದರೂ ಮುಖ್ಯಮಂತ್ರಿ ನಿನ್ನೆ (ಗುರುವಾರ) ಬಂದು ಸ್ವಾಂತನ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಿಡಿಮಿಡಿಗೊಂಡರು.
     ಸಂಸದೆ ಮಂಗಲ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮುಖಂಡರಾದ ಎಂ.ಬಿ. ಜಿರಲಿ, ರಮೇಶ ದೇಶಪಾಂಡೆ, ಮುರುೇಂದ್ರಗೌಡ ಪಾಟೀಲ, ಎಫ್.ಎಸ್. ಸಿದ್ದನಗೌಡ್ರ, ಹನಮಂತ ಕೊಂಗಾಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts