More

  ಅಶ್ವಿನಿ ಪುನೀತ್​ ರಾಜ್​ಕುಮಾರ್​ ಭೇಟಿ ಮಾಡಿದ ಶೋಭಾ ಕರಂದ್ಲಾಜೆ

  ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಈಗಾಗಲೇ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಟಿಕೆಟ್ ಪಡೆದ ಅಭ್ಯರ್ಥಿಗಳು ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೇಳುತ್ತಿದ್ದಾರೆ.

  ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

  ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮಾಜಿ ದಂಪತಿ; ಮತ್ತೆ ಒಂದಾಗ್ತಾರ ಈ ಸ್ಟಾರ್​ ಕಪಲ್​

  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ, ಲೋಕಸಭಾ ಚುನಾವಣೆಗೆ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

  ಈ ಹಿಂದೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಕೆಲಸ ಮಾಡಿದ್ದ ಶೋಭಾ ಕರಂದ್ಲಾಜೆ ಈ ಬಾರಿ ಬೆಂಗಳೂರು ಉತ್ತರ ಲೋಕಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅಂತಿಮವಾಗಿ ವಿಜಯಲಕ್ಷ್ಮೀ ಇವರ ಕೈ ಹಿಡಿಯಲಿದ್ದಾಳಾ ಎಂದು ಕಾದು ನೋಡಬೇಕಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts