ಹಿಂದುಗಳೆಲ್ಲ ಒಗ್ಗಟ್ಟಾಗದಿದ್ದರೆ ಆಸ್ತಿ ವಕ್ಪ ಪಾಲು

blank

ಶಿಗ್ಗಾಂವಿ: ಭಾರತ ಹಾಗೂ ಹಿಂದು ಧರ್ಮ ಸುರಕ್ಷಿತವಾಗಿ ಇರಬೇಕೆಂದರೆ ಎಲ್ಲ ಹಿಂದುಗಳು ಜಾತಿ, ಮತವೆನ್ನದೇ ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಮತ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನವಿ ಮಾಡಿದರು.

ಶಿಗ್ಗಾಂವಿ ತಾಲೂಕಿನ ಎನ್.ಎಂ. ತಡಸ, ಹಿರೇಬೆಂಡಿಗೇರಿ, ಮುಗಳಿ, ಬನ್ನೂರು ಗ್ರಾಮಗಳಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎನ್ನುವುದನ್ನು ನೋಡಿದ್ದೀರಿ, ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳು ಕಡಿಮೆ ಆಗಿದ್ದರಿಂದ ಒಂದು ಕಾಯ್ದೆ ತಿದ್ದುಪಡಿ ಮಾಡಲು ಕಷ್ಟ ಆಗಿದೆ. ನಾವು ಅವರನ್ನು ಅಣ್ಣ-ತಮ್ಮಂದಿರು ಎಂದು ತಿಳಿದುಕೊಂಡಿದ್ದೇವೆ. ಆದರೆ, ಅವರ ಧರ್ಮದಲ್ಲಿ ಬೇರೆ ಧರ್ಮದವರನ್ನು ಅಣ್ಣ-ತಮ್ಮ ಎನ್ನುವ ಮಾತೇ ಇಲ್ಲ. 2019ರಲ್ಲಿ ಶೋಭಾ ಕರಂದ್ಲಾಜೆ ಅವರು ಸಂಸತ್ತಿನಲ್ಲಿ ನಮ್ಮ ದೇಶದಲ್ಲಿ ವ್ಪಕ್ ಆಸ್ತಿ ಎಷ್ಟಿದೆ ಎಂದು ಕೇಳಿದ್ದರು. ಆಗ 5 ಲಕ್ಷ ಎಕರೆ ಎಂದು ಹೇಳಿದ್ದರು. ಈಗ ಒಂಬತ್ತೂವರೆ ಲಕ್ಷ ಎಕರೆ ತಲುಪಿದೆಯಂತೆ. ಈಗ ಅನೇಕ ಸಂಸದರ ಒತ್ತಡದಿಂದ ವಕ್ಪ್ ಕಾಯ್ದೆ ತಿದ್ದುಪಡಿ ಮಾಡಲು ಸಂಸತ್ತಿನ ಜಂಟಿ ಸದನ ಸಮಿತಿ ರಚನೆ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ವಕ್ಪ್ ಆಸ್ತಿ 8 ಲಕ್ಷ ಎಕರೆ ಇದೆ. ಭಾರತದಲ್ಲಿ 9.5 ಲಕ್ಷ ಎಕರೆ ವಕ್ಪ್ ಆಸ್ತಿ ಇದೆ. ಕಾಂಗ್ರೆಸ್​ನವರು ಭಾರತದಲ್ಲಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪಂಚಮಸಾಲಿ ಸಮುದಾಯಕ್ಕೆ ಬಸವರಾಜ ಬೊಮ್ಮಾಯಿ 2ಡಿ ಮೀಸಲಾತಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಅದನ್ನು ಜಾರಿ ಮಾಡುತ್ತಿಲ್ಲ. ಮೀಸಲಾತಿ ನೀಡುವಂತೆ ನಾವು ಡಿಸೆಂಬರ್​ನಲ್ಲಿ ಸುವರ್ಣಸೌಧಕ್ಕೆ ಟ್ರ್ಯಾಕ್ಟರ್ ಸಮೇತ ಮುತ್ತಿಗೆ ಹಾಕಲು ತೀರ್ವನಿಸಿದ್ದೇವೆ ಎಂದರು.

ತಾತ್ಕಾಲಿಕ ಸುಖಕ್ಕೆ ಕಾಂಗ್ರೆಸ್​ಗೆ ಮತ ಹಾಕಿದರೆ ಮುಸ್ಲಿಮರ ಕೈಯಲ್ಲಿ ಕೆಲಸಕ್ಕೆ ಹೋಗಬೇಕಾಗುತ್ತದೆ. ಸಿದ್ದರಾಮಯ್ಯ ಅವರು ಜಮೀರ್ ಅವರಿಗೆ ಎಲ್ಲ ವಕ್ಪ್ ಆಸ್ತಿ ಸಮೀಕ್ಷೆ ಮಾಡಲು ಹೇಳಿದ್ದರು. ಭಾರತ, ಹಿಂದು ಧರ್ಮ ಉಳಿಯಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಎಂದರು.

ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು 300 ಸ್ಥಾನ ಕೊಟ್ಟಿದ್ದರೆ, ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಂತೆ, ವಕ್ಪ್ ಕಾಯ್ದೆ ತಿದ್ದುಪಡಿ ಮಾಡಲು ಅನುಕೂಲವಾಗುತ್ತಿತ್ತು. ರಾಜ್ಯ ಸರ್ಕಾರ ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂ.ಗಳಲ್ಲಿ 90 ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದು, ಅದನ್ನು ಸಿಎಂ ಒಪ್ಪಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ಮುಸ್ಲಿಮರಾಗಿ ಹುಟ್ಟುತ್ತಾರಂತೆ: ಸಚಿವ ಜಮೀರ ಅಹ್ಮದ್ ಮುಸ್ಲಿಮರಿಗೆ ಗೋರಿ ತೋರಿಸಿ ವಕ್ಪ್ ಆಸ್ತಿ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವುದಾಗಿ ಹೇಳುತ್ತಿದ್ದಾರೆ. ಅದಕ್ಕಾಗಿ ಈಗಲೇ ಎಲ್ಲ ಆಸ್ತಿಯನ್ನು ವಕ್ಪ್ ಆಸ್ತಿ ಮಾಡುತ್ತಿದ್ದಾರೆ. ಹಾಲುಮತದ ಸಮುದಾಯದ ಉತ್ತರ ಕರ್ನಾಟಕದಲ್ಲಿ ಅತ್ಯಂತ ಶ್ರೇಷ್ಠ ಸಮುದಾಯ, ನಾವು ಯಾವುದೇ ಶುಭ ಕಾರ್ಯ ಮಾಡಲು ಹಾಲುಮತದವರಿಂದ ಪೂಜೆ ಮಾಡಿಸುತ್ತೇವೆ. ಅಂತಹ ಶ್ರೇಷ್ಠ ಸಮುದಾಯದಲ್ಲಿ ಹುಟ್ಟಿದ ಸಿದ್ದರಾಮಯ್ಯ ಆ ಸಮುದಾಯಕ್ಕೆ ಕಳಂಕ ತರುತ್ತಿದ್ದಾರೆ ಎಂದು ಆರೋಪಿಸಿದರು.

ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೇಲೆ 17 ಕೇಸ್ ಇದ್ದಾವೆ. ಸಚಿವೆ ಲಕ್ಷಿ್ಮೕ ಹೆಬ್ಬಾಳ್ಕರ್ ಅವರು ಪೈಲ್ವಾನ್​ನನ್ನು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ಅವರೊಂದಿಗೆ ಕುಸ್ತಿ ಹಿಡಿಯಯಬೇಕಾ ಎಂದು ಪ್ರಶ್ನಿಸಿದರು.

ಎಲ್ಲರೂ ಮತದಾನ ಮಾಡಿ: ಎಲ್ಲ ಹಿಂದುಗಳು ಮತದಾನದ ದಿನ ಬೆಳಗ್ಗೆ 6 ಗಂಟೆಗೆ ಹೋಗಿ ಮತದಾನ ಮಾಡಬೇಕು ಎಂದು ಯತ್ನಾಳ ಸಲಹೆ ನೀಡಿದರು. ವಿಜಯಪುರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಅವರ ಕೊಡುಗೆ ಇದೆ. ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಿದ್ದಾರೆ. ಭರತ್ ಬೊಮ್ಮಾಯಿಯನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಂಸದ ಬಸವರಾಜ ಬೊಮ್ಮಾಯಿ, ಗಂಗಣ್ಣ ಸಾತಣ್ಣನವರ, ಶಿವಾನಂದ ಮ್ಯಾಗೇರಿ, ವಿಶ್ವನಾಥ ಹರವಿ, ತಿಪ್ಪಣ್ಣ ಸಾತಣ್ಣನವರ ಇತರರಿದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…