ಶಿಗ್ಗಾಂವಿ: ಹಿಂದುಳಿದ ವರ್ಗದ ನೇತಾರ ದಿ. ದೇವರಾಜ ಅರಸ್ ಅವರ ಕೊಡುಗೆಗಳು ಸಾಕಾರಗೊಂಡಿವೆ ಎಂಬುದಕ್ಕೆ ಕಾಂಗ್ರೆಸ್ನ ಪಂಚ ಗ್ಯಾರಂಟಿ ಯೋಜನೆಗಳೇ ಸಾಕ್ಷಿ. ಪಕ್ಷದ ಗೆಲುವಿಗೆ ಇವುಗಳು ಕಾರಣವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಹುಲಗೂರ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಪಕ್ಷದ ಅಭ್ಯರ್ಥಿ ಯಾಸೀರ್ಖಾನ್ ಪಠಾಣ್ ಪರ ಮತಯಾಚಿಸಿ ಅವರು ಮಾತನಾಡಿದರು. ಊಳುವವನೇ ಭೂ ಒಡೆಯ ಎಂದು ಅನೇಕರಿಗೆ ಭೂಮಿ ಭಾಗ್ಯ ಕಲ್ಪಿಸಿದ ಡಿ. ದೇವರಾಜ ಅರಸ್ ಅವರು, ಆಶ್ರಯ, ಆರಾಧನಾ ಸಹಿತ ಇನ್ನಿತರ ಯೋಜನೆಗಳ ಮೂಲಕ ಜನಮಾನಸದಲ್ಲಿ ಉಳಿದಿರುವ ದಿ. ಎಸ್. ಬಂಗಾರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ಮೂಲಕ ಶೋಷಿತರ, ಬಡವರ, ಮಹಿಳಾ ಪರ ಅನೇಕ ದಿಟ್ಟ ಕಾರ್ಯಕ್ರಮಗಳನ್ನು ಜಾರಿಗೆ ತಂದು ನಿಜವಾದ ಪ್ರಜಾಪ್ರಭುತ್ವ ಸ್ಥಾಪಿಸಿ ಜನರ ಕನಸು ನನಸು ಮಾಡಿದ್ದಾರೆ ಎಂದರು. ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಮಾತನಾಡಿ, ಕ್ಷೇತ್ರ ಪುನರ್ವಿಂಗಡಣೆ ಮುನ್ನ ಶಿಗ್ಗಾಂವಿ ತಾಲೂಕಿನ 22 ಗ್ರಾಮಗಳು ಕುಂದಗೋಳ ಕ್ಷೇತ್ರಕ್ಕೊಳಪಟ್ಟಿದ್ದವು. ಆಗ ಕಾಂಗ್ರೆಸ್ ಪಕ್ಷವನ್ನು ಇಲ್ಲಿಯ ಮತದಾರ ಬೆಂಬಲಿಸಿದ್ದಾರೆ. ಈ ಬಾರಿಯೂ ಪಕ್ಷದ ಅಭ್ಯರ್ಥಿಯೇ ಅತ್ಯಧಿಕ ಮತಗಳಿಂದ ಗೆಲ್ಲಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. ಜಿಪಂ ಮಾಜಿ ಅಧ್ಯಕ್ಷೆ ಪ್ರೇಮಾ ಪಾಟೀಲ, ಮುಖಂಡ ಎನ್.ವಿ. ಪಾಟೀಲ, ಹುಲಗೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾವೇದ್ ಅಹ್ಮದ್ ಸವಣೂರ, ಇತರರು ಇದ್ದರು.
ಹಿಂದುಳಿದವರ ಕಲ್ಯಾಣವೇ ಕಾಂಗ್ರೆಸ್ ಗುರಿ
You Might Also Like
ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಈ ವರ್ಷ ಗೂಗಲ್ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…
ಟಾಯ್ಲೆಟ್ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್ ವಿಧಾನ | Tips
ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…
ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips
ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…