More

    ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ

    ಶಿಕಾರಿಪುರ: ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
    ಬೆಳಗ್ಗೆ ರಥೋತ್ಸವದ ಮಹಾಬಲಿ ಹಾಗೂ ಶ್ರೀ ಮಹಾಗಣಪತಿ ಪೂಜೆಯೊಂದಿಗೆ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ ಆರಂಭವಾಯಿತು. ರಥಬೀದಿಯುದ್ದಕ್ಕೂ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.
    ಚುನಾವಣಾ ನೀತಿಸಂಹಿತೆ ಇರುವುದರಿಂದ ಜನಪ್ರತಿನಿಧಿಗಳು ದೂರದಿಂದಲೇ ಶ್ರೀ ಸ್ವಾಮಿಯ ದರ್ಶನಾಶೀರ್ವಾದ ಪಡೆದರು.
    ರಾಜ್ಯದ ಬಹುತೇಕ ಜಿಲ್ಲೆಗಳಲ್ಲದೆ, ಹೊರರಾಜ್ಯದಲ್ಲಿಯೂ ಸಹ ಹುಚ್ಚರಾಯಸ್ವಾಮಿಯ ಭಕ್ತರಿದ್ದಾರೆ. ಸ್ಥಳೀಯರು, ಬೇರೆ ಕಡೆಗಳಲ್ಲಿ ಉದ್ಯೋಗ ವ್ಯವಹಾರ ಹಾಗೂ ವಿದ್ಯಾಭ್ಯಾಸದಲ್ಲಿ ತೊಡಗಿರುವವರು ಶ್ರೀ ಸ್ವಾಮಿಯ ಜಾತ್ರೆಗೆ ತಪ್ಪದೆ ಬರುತ್ತಾರೆ.
    ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಈ ದೇಶದ ಅಖಂಡತೆ, ಸಮಗ್ರತೆ ಮತ್ತು ರಕ್ಷಣೆಯ ದೃಷ್ಟಿಯಿಂದ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಜನ ಬಯಸುತ್ತಿದ್ದಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆಯ ಆತಂಕವುಂಟಾಗಿದೆ. ನೇಹಾ ಪ್ರಕರಣ ಜನತೆಯ ಮೇಲೆ ಅಗಾಧ ಪರಿಣಾಮ ಬೀರಿದೆ. ಸರ್ಕಾರದ ತುಷ್ಟೀಕರಣ ನೀತಿಯಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts