More

    ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗ: ಟೆಂಡರ್ ಪ್ರಕ್ರಿಯೆ ಆರಂಭ

    ಶಿವಮೊಗ್ಗ: ಬಹು ನಿರೀಕ್ಷಿತ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣದ ಮೊದಲ ಹಂತದ ಕಾಮಗಾರಿಗೆ ಮೂರು ದಿನಗಳ ಹಿಂದೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಹಂತದಲ್ಲಿ 517 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ಶಿಕಾರಿಪುರದವರೆಗೆ ರೈಲ್ವೆ ಮಾರ್ಗ ನಿರ್ಮಾಣವಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
    ಈ ಕಾಮಗಾರಿಯಲ್ಲಿ 30 ಹಳ್ಳಿಗಳ ಮೂಲಕ ರೈಲು ಮಾರ್ಗ ಹಾದುಹೋಗಲಿದೆ. 555 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದ್ದು, ಶೇ.90ರಷ್ಟು ಪ್ರಕ್ರಿಯೆ ಮುಕ್ತಾಯವಾಗಿದೆ. ಭೂಸ್ವಾಧೀನಕ್ಕೆ 130 ಕೋಟಿ ರೂ. ಕಾಮಗಾರಿ ಮುಕ್ತಾಯಕ್ಕೆ 30 ತಿಂಗಳ ಗಡುವು ನಿಗದಿಪಡಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸ್ವಾತಂತ್ರೃಪೂರ್ವದಲ್ಲಿ ಜಿಲ್ಲೆಯಲ್ಲಿ ರೈಲ್ವೆ ಮಾರ್ಗ ನಿರ್ಮಾಣವಾಗಿತ್ತು. 2010ರಲ್ಲಿ ಶಿವಮೊಗ್ಗ-ತಾಳಗುಪ್ಪ ನಡುವಿನ ಮೀಟರ್‌ಗೇಜ್ ಮಾರ್ಗವನ್ನು ಬ್ರಾಡ್‌ಗೇಜ್‌ಗೆ ಪರಿವರ್ತಿಸಲಾಯಿತು. ಶಿವಮೊಗ್ಗ-ಬೀರೂರು ನಡುವಿನ ಮಾರ್ಗವನ್ನು ರೈಲ್ವೆ ಇಲಾಖೆ ಬ್ರಾಂಚ್ ಲೈನ್ ಎಂದು ಗುರುತಿಸಿದೆ. ಬ್ರಾಂಚ್ ಲೈನ್ ಆಗಿದ್ದರೂ ಇಲ್ಲಿ ಸಂಚರಿಸುವ ರೈಲಿನ ಪ್ರಮಾಣ ಅಧಿಕವಾಗಿರುವುದು ವಿಶೇಷ ಎಂದರು.
    ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗದಿಂದ ಮಲೆನಾಡಿಗೆ 8-10 ರಾಜ್ಯಗಳೊಂದಿಗೆ ಸಂಪರ್ಕ ಸಿಗಲಿದೆ. ಪ್ರವಾಸೋದ್ಯಮ, ವಾಣಿಜ್ಯ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts