More

    ಪ್ರಮುಖ ಸರ್ಕಾರಿ ಶಾಲೆಗಳಿಗೂ ಬಸ್ಸಿನ ಸೌಲಭ್ಯ

    ಚಿತ್ರದುರ್ಗ
    ತಾಲೂಕಿನ ವಿವಿಧ ಪ್ರಮುಖ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಬಸ್ಸಿನ ಸೌಲಭ್ಯ ಒದಗಿಸಲಾಗುವುದೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.
    ಹೊಳಲ್ಕೆರೆ ಪಟ್ಟಣದ ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಾಜ್ಯಸರ್ಕಾರಿ ನೌಕರರ ಸಂಘ,ಪ್ರಾಥಮಿಕ,ಪ್ರೌಢ ಶಾಲಾ ಶಿಕ್ಷಕರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾ ಚರಣೆ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿ,ಕಾಶೀಪುರ ಹಾಗೂ ಎಂ.ಎಂ.ಸರ್ಕಾರಿ ಶಾಲೆಗೆ ಬಸ್ಸಿನ ಸೌಲಭ್ಯವನ್ನು ಉಚಿತವಾಗಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಮುಖ ಶಾಲೆಗಳಿಗೂ ಈ ಸೌಲಭ್ಯ ವಿಸ್ತರಿಸುವುದಾಗಿ ಭರವಸೆ ನೀಡಿದರು.

    ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 300 ಹೊಸ ಕೊಠಡಿಗಳನ್ನು ನಿರ್ಮಿಸಲಾಗಿದೆ. ಆಯ್ದ ಶಾಲೆಗಳಿಗೆ ಕಂಪ್ಯೂಟರ್ ಸೌಲಭ್ಯವನ್ನು ಒದಗಿಸ ಲಾಗಿದೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ರಾಷ್ಟ್ರಪತಿ ಆಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಶಿಕ್ಷಕಿಯಾಗಿದ್ದರು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು.

    ಉತ್ತಮ ಪ್ರಜೆಗಳನ್ನು ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಶೇ.40 ಅನು ದಾನ ಮೀಸಲಿಟ್ಟಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು,ಶಾಲೆಗಳ ಮೂಲ ಸೌಕರ್ಯಗಳ ಸುಧಾರಣೆಗೆ 27500 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದರು.

    ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಟಿ.ಪಿ.ಉಮೇಶ್ ಸೇರಿದಂತೆ ತಾಲೂಕು ಮಟ್ಟದ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ದಾವಣಗೆರೆ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕಾಕನೂರು ಎಂ.ಬಿ.ನಾಗರಾಜ್ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್,ಉಪಾಧ್ಯಕ್ಷ ಕೆ.ಸಿ.ರಮೇಶ್, ಮುರುಗೇಶ್,ಮಲ್ಲಿಕಾರ್ಜುನ ಸ್ವಾಮಿ,ಸಜಿಲ್,ಅಮೃತ್ ಆರ್ಗ್ಯಾನಿಕ್ಸ್ ಕಾರ್ಖಾನೆ ಮಾಲೀಕ ಕೆ.ನಾಗರಾಜ್,ತಹಸೀಲ್ದಾರ್ ರೇಖಾ, ಬಿಇಒ ಎಚ್.ಶ್ರೀನಿವಾಸ್,ಬಿಆರ್‌ಸಿ ಸುರೇಂದ್ರನಾಥ್,ವೆಂಕಟೇಶ್,ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಪ್ಪ, ಶಾಂತಪ್ಪ, ಮೃತ್ಯುಂಜಯಪ್ಪ, ಎನ್.ಶಿವಮೂರ್ತಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts