ಹೆಸರಿಗಷ್ಟೇ ಇರುವ ಇಲಾಖೆ, ಅಲೆಮಾರಿ ಅಭಿವೃದ್ಧಿ ನಿಗಮ

UDP-2-1-Protest

ಸಂತೋಷ್​ ಬಜಾಲ್​ ಆರೋಪ | ಶಿಳ್ಳೆಕ್ಯಾತ ಸಮುದಾಯದಿಂದ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಪರಿಶಿಷ್ಟ ಜಾತಿಗೆ ಸೇರಿದ ಶಿಳ್ಳೆಕ್ಯಾತ ಸಮುದಾಯಗಳು ಅಲೆಮಾರಿಗಳಾಗಿರುವುದರಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಈ ಸಮುದಾಯಗಳನ್ನು ಮೇಲಕ್ಕೆತ್ತಲೆಂದೇ ಇರುವ ಸಮಾಜ ಕಲ್ಯಾಣ ಇಲಾಖೆ, ಅಲೆಮಾರಿ ಅಭಿವೃದ್ಧಿ ನಿಗಮಗಳು ಹೆಸರಿಗಷ್ಟೇ ಇದ್ದು, ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡುತ್ತಿಲ್ಲ ಎಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಗೌರವ ಸಲಹೆಗಾರ ಸಂತೋಷ್​ ಬಜಾಲ್​ ಆರೋಪಿಸಿದರು.

ಮನೆ, ನಿವೇಶನ ಸಹಿತ ಹಲವು ಮೂಲ ಸೌಕರ್ಯ ಒದಗಿಸಿಕೊಡಲು ಒತ್ತಾಯಿಸಿ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗುಡಿಸಲಿಗೆ ಭೇಟಿ ನೀಡಿ

ಮತೀಯ ಧರ್ಮರಾಜಕಾರಣಕ್ಕೆ ಅಬ್ಬರಿಸುವವರು ಅಲೆಮಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವುದಲೇ ಇಲ್ಲ. ಬ್ರಹ್ಮಾವರ, ಪಾಂಗಳ, ಮಲ್ಪೆ, ಕಟ್​ ಬೆಳ್ತೂರು, ಗುಲ್ವಾಡಿ ನದಿ ತಟದಲ್ಲಿ ವಾಸಿಸುತ್ತಿರುವ ಅಲೆಮಾರಿಗಳ ಗುಡಿಸಲಿಗೆ ಶಾಸಕರು, ಸಂಸದರು ಮತ್ತು ಜಿಲ್ಲಾಡಳಿದ ಅಧಿಕಾರಿಗಳು ಒಮ್ಮೆ ಭೇಟಿ ನೀಡಿ ಅಧ್ಯಯನ ಮಾಡಬೇಕು. ಸ್ಥಳೀಯವಾಗಿ ಅನೇಕ ಬಾರಿ ಈ ಸಮುದಾಯಗಳು ದೌರ್ಜನ್ಯಕ್ಕೊಳಗಾಗುತ್ತವೆ. ಅವರ ಗುಡಿಸಲಿಗೆ ನುಗ್ಗಿ ಹಲ್ಲೆ ನಡೆಸುತ್ತಾರೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ನಿರೀಕ್ಷಣಾ ಜಾಮೀನು ಪಡೆಯುವವರೆಗೆ ಬಂಧಿಸದೆ ಪೊಲೀಸರೂ ಸಹ ತಾರತಮ್ಯ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಗೌರವ ಸಲಹೆಗಾರ ಸಂತೋಷ್​ ಬಜಾಲ್ ಮಾತನಾಡಿದರು.

ಅಕ್ರಮ ದಂಧೆಕೋರರ ಸಹಕಾರ

ಸಂಘಟನೆಯ ಗೌರವಾಧ್ಯಕ್ಷ ಕವಿರಾಜ್​ ಎಸ್​. ಕಾಂಚನ್​ ಮಾತನಾಡಿ, ಗಂಗೊಳ್ಳಿಯಿಂದ ಬಂದು ಹಲ್ಲೆ ನಡೆಸಿರುವವರಿಗೆ ಪೊಲೀಸ್​ ಬಂಧನದಿಂದ ರಕ್ಷಿಸಲು ಮತ್ತು ನಿರೀಕ್ಷಣಾ ಜಾಮೀನು ಪಡೆಯಲು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಲಾಢ್ಯರು ಸಹಕರಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದರು.

ಸಿಐಟಿಯು ಕಾರ್ಮಿಕ ಸಂಘಟನೆಯ ಉಡುಪಿ ಜಿಲ್ಲಾ ಮುಖಂಡ ಶಶಿಧರ್​ ಗೊಲ್ಲ, ಅಲೆಮಾರಿ ಸಮುದಾಯದ ಮುಖಂಡ ಶಂಕರ ಗುಲ್ವಾಡಿ, ಹಲ್ಲೆಗೊಳಗಾದ ಮಹಿಳೆ ಜಯಮಾಲಾ, ದೀಪು ಮಾತನಾಡಿದರು. ಕರವೇ ಉಡುಪಿ ಜಿಲ್ಲಾ ಸಂಚಾಲಕ ಪ್ರಭಾಕರ್​ ಪೂಜಾರಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಸಂಚಾಲಕ ಸಿದ್ದಬಸಯ್ಯ ಸ್ವಾಮಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಮನವಿ ಸ್ವೀಕಾರ

ಪ್ರತಿಭಟನೆಯ ನಂತರ ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್​. ಮನವಿ ಸ್ವೀಕರಿಸಿ ಮಾತನಾಡಿ, ತಮ್ಮ ಬೇಡಿಕೆ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಿಐಟಿಯು ಮುಖಂಡರಾದ ವೋಹನ್​, ನಳಿನಿ ಎಸ್​., ಕರಾವಳಿ ವೃತ್ತಿನಿರತ ಅಲೆಮಾರಿ ಸಮುದಾಯದ ರಾಜ್ಯ ಮುಖಂಡರಾದ ವೆಂಕಟೇಶ, ಲೋಕೇಶ್​ ಉಪಸ್ಥಿತರಿದ್ದರು. ಬಾಬು, ಪ್ರಕಾಶ್​, ಲೋಕೇಶ್​, ಸಿದ್ದಪ್ಪ, ಸ್ವಾಮಿ, ನಾಗರಾಜ್​ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಮಿತಿಯ ಕಾರ್ಯದರ್ಶಿ ರಾಮ ಟಿ.ಎನ್​. ನಿರೂಪಿಸಿದರು.

Share This Article

ಬ್ರೆಡ್​​ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್​; ಇಲ್ಲಿದೆ ಸಿಂಪಲ್​ ವಿಧಾನ | Recipe

ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…

ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe

ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…

ಬಹಳ ಇಷ್ಟಪಟ್ಟು ಪನೀರ್​ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips

ನಾನ್​ವೆಜ್​​​​​​ ಇಷ್ಟಪಡದವರು ಪ್ರೋಟೀನ್​ಗಾಗಿ ಪನೀರ್​​​​ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…