ಶಿವಮೊಗ್ಗ: ವಿಐಎಸ್‍ಎಲ್ ಕಾರ್ಖಾನೆ ಪುನರುಜ್ಜೀವನಕ್ಕೆ 15 ಸಾವಿರ ಕೋಟಿ ರೂ. ಅಗತ್ಯವಿದೆ ಎಂದ ಸಚಿವ ಕುಮಾರಸ್ವಾಮಿ

HD Kumaraswamy

ಶಿವಮೊಗ್ಗ: ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ನಟ ಪವನ್ ಕಲ್ಯಾಣ್ 6 ಕೋಟಿ ರೂ.ದೇಣಿಗೆ!

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು ಎಷ್ಟು ಹೋರಾಟ ಮಾಡುತ್ತಿದ್ದೇನೆ ಎಂಬುದು ನನಗೆ ಮಾತ್ರ ಗೊತ್ತಿದೆ. ಕಾರ್ಖಾನೆಗೆ ಜೀವ ಕೊಡುವ ಕೆಲಸ ಮಾಡುತ್ತಿದ್ದೇನೆ. ಆರ್ಥಿಕ ಏರಿಳಿತ ಆಗಿರುವ ಕಂಪನಿಗಳನ್ನು ಖಾಸಗಿತನಕ್ಕೆ ಒಪ್ಪಿಸಬೇಕೆಂಬ ತೀರ್ಮಾನ ಆಗಿದೆ. ಬಂಡವಾಳ ಹೂಡಿಕೆ ಮಾಡಿದಂತೆ ನಿರ್ಧರಿಸಲಾಗಿದೆ. ಆದರೂ ವಿಐಎಸ್‌ಎಲ್ ಉಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದೇನೆ ಎಂದು ಹೇಳಿದರು.

ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪಾತ್ ನಿಗಮ್(ಆರ್‌ಎನ್‌ಐಎಲ್) ಕಾರ್ಖಾನೆಯ ಪರಿಸ್ಥಿತಿಯೂ ವಿಐಎಸ್‌ಎಲ್‌ಗೆ ಭಿನ್ನವಾಗಿಲ್ಲ. ಲಾಭದಲ್ಲಿದ್ದ ಆ ಕಾರ್ಖಾನೆ ಇಂದು ನಷ್ಟದಲ್ಲಿದೆ. ಅದರ ಅಭಿವೃದ್ಧಿಗೆ 35 ಸಾವಿರ ಕೋಟಿ ರೂ. ಅಗತ್ಯವಿದೆ. ಅದೇ ರೀತಿ ವಿಐಎಸ್‌ಎಲ್​ಗೆ ಕನಿಷ್ಠ 15 ಸಾವಿರ ಕೋಟಿ ರೂ. ಅಗತ್ಯವಿದೆ. ಕಾರ್ಖಾನೆ ಅಭಿವೃದ್ಧಿ ವಿಷಯದಲ್ಲಿ ನಾನು ಪ್ರವಾಹದ ವಿರುದ್ಧ ಈಜಬೇಕಿದೆ ಎಂದರು.

ಬೃಹತ್ ಕೈಗಾರಿಕೆ ಇಲಾಖೆಯಲ್ಲಿ ದೊಡ್ಡಮಟ್ಟದ ಅನುದಾನ ಒದಗಿಸುವ ಅವಕಾಶವಿಲ್ಲ. ಯಾವುದೇ ಯೋಜನೆಗಳಿದ್ದರೂ ಅದನ್ನು ಸಚಿವ ಸಂಪುಟದಲ್ಲಿಟ್ಟು ಹಣಕಾಸು ಇಲಾಖೆಗೆ ಶಿಫಾರಸು ಮಾಡಬಹುದು. ಇಡೀ ಘಟಕವನ್ನೇ ಮರು ನಿರ್ಮಾಣ ಮಾಡಬೇಕಿದೆ. ಸೈಲ್(ಭಾರತೀಯ ಉಕ್ಕು ಪ್ರಾಧಿಕಾರ)ನಿಂದ ಕಾರ್ಖಾನೆಗೆ ಜೀವ ತುಂಬಬೇಕಿದೆ. ಸ್ವಲ್ಪ ಸಮಯವನ್ನು ತೆಗೆದುಕೊಳ್ಳಲಿದೆ. ಹಾಗಾಗಿ ಕಾರ್ಮಿರು ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಗೊಂದಲ, ಅನುಮಾನಗಳು ಬೇಡ ಎಂದು ಹೇಳಿದರು.

ಆಡಳಿತ ಯಂತ್ರದ ಮೇಲೆ ಪರಿಣಾಮ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವು ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಕಾಂಗ್ರೆಸ್‌ನಲ್ಲೇ ಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಅವರ ಪಕ್ಷದ ನಡುವಳಿಕೆ ನಮಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಬಗ್ಗೆ ಅವರೇ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಆಡಳಿತ ನಿಯಂತ್ರಣ ಮೇಲೆ ಪರಿಣಾಮ ಬೀರುತ್ತಿದೆ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಆಗುತ್ತಿಲ್ಲ. ಪ್ರತಿನಿತ್ಯ ಇದೇ ರೀತಿ ಮುಂದುವರಿದರೆ ಅಧಿಕಾರಿಗಳು ಮಾತು ಕೇಳುವುದಿಲ್ಲ ಎಂದು ಎಚ್‌ಡಿಕೆ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ವಿಷಯಕ್ಕಿಂತ ಬೇರೆಯದ್ದೇ ವಿಷಯಗಳ ಬಗ್ಗೆ ಬರ್ಚೆ ಆಗುತ್ತಿದೆ. ಹಲವಾರು ಯೋಜನೆಯ ಜಾರಿಯಲ್ಲಿ ಲೋಪದೋಷಗಳಿವೆ. ಇಂತಹ ಪರಿಸ್ಥಿತಿ ಹಿಂದೆಂದೂ ಇರಲಿಲ್ಲ. ಆಡಳಿತ ಪಕ್ಷದ ಕೊನೆಯಲ್ಲಿ ಅದರ ಬಗ್ಗೆ ಟೀಕೆ ಟಿಪ್ಪಣಿ ಸಹಜ. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ವರ್ಷ ಕಳೆಯುವ ಮೊದಲೇ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಹಿಂದಿನ ಸರ್ಕಾರದ ಮೇಲೆ ಕೇಳಿಬರುತ್ತಿದ್ದ ಶೇ.40ಗಿಂತ ಹೆಚ್ಚು ಭ್ರಷ್ಟಾಚಾರ ಈಗ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕಿ ಶಾರದಾ ಪೂರ್ಯನಾಯಕ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಕಡಿದಾಲ್ ಗೋಪಾಲ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಪ್ರಮುಖರಾದ ಶಾರದಾ ಅಪ್ಪಾಜಿಗೌಡ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಆಂಧ್ರದಲ್ಲಿ ಭೀಕರ ಪ್ರವಾಹ: ಭಾದಿತರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆ, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ.ಪರಿಹಾರ!

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…