More

    ವೈಯಕ್ತಿಕ ಟೀಕೆ ಇಲ್ಲ ಕೀಳು ಮಟ್ಟದ ರಾಜಕಾರಣ ಮಾಡಲ್ಲ: ಆಪ್ ಉಪಾಧ್ಯಕ್ಷ ಭಾಸ್ಕರ್ ರಾವ್

    ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಯನ್ನು ವೈಯಕ್ತಿಕ ಟೀಕೆಗಳಿಗೆ ಬಳಸುವುದಿಲ್ಲ. ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ. ನಾವು ಇಂದು-ನಾಳೆಗಾಗಿ ಕೆಲಸ ಮಾಡುತ್ತಿಲ್ಲ. ಮುಂದಿನ ಜನಾಂಗಕ್ಕಾಗಿ ಈಗಿನಿಂದಲೇ ದಕ್ಷ ಸರ್ಕಾರ ರಚನೆಗೆ ಪಣ ತೊಟ್ಟಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.
    ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೇಲೆ ಜನರು ಇಟ್ಟಿದ್ದ ನಂಬಿಕೆ ಹುಸಿಯಾಗಿದೆ. ವೈಯಕ್ತಿಕ ಟೀಕೆಗಳಿಗೆ ಸೀಮಿತವಾಗಿದ್ದಾರೆ. ಜನರ ಆಶೋತ್ತರಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಹಾಗಾಗಿ ಉದ್ಯೋಗ ಸೃಷ್ಟಿ, ಶಿಕ್ಷಣ, ಸಾರಿಗೆ, ಕುಡಿಯುವ ನೀರು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಎಪಿಪಿ ಕಳೆದ 10 ವರ್ಷಗಳಲ್ಲೇ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ರಚನೆ ಮಾಡಿದೆ. ಗೋವಾ, ಮಹಾರಾಷ್ಟ್ರ, ಗುಜರಾತ್‌ನಲ್ಲಿ ತನ್ನ ಪ್ರಭಾವ ಬೀರಿದೆ. ಹರಿಯಾಣ, ಅಸ್ಸಾಂ ಸೇರಿದಂತೆ ಹಲವೆಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಪಕ್ಷ ಸದೃಢವಾಗುತ್ತಿದೆ. ಇದೀಗ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಚುನಾವಣೆ ಎದುರಾಗುತ್ತಿದ್ದು ಮೊದಲಿಗೆ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡು ಬೂತ್‌ಮಟ್ಟದಿಂದ ಪಕ್ಷವನ್ನು ಬಲಗೊಳಿಸುತ್ತಿದ್ದೇವೆ ಎಂದರು. ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಗೋಕುಲ್, ಮುಖಂಡೆ ನೇತ್ರಾವತಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts