More

    ಬಸವಣ್ಣನ ತತ್ವ ಬದುಕಿಗೆ ಪೂರಕ: ಸಿಎಂ ಪ್ರತಿಪಾದನೆ

    ಶಿವಮೊಗ್ಗ: ಬಸವಾದಿ ಶರಣರು ಪ್ರತಿಪಾದಿಸಿದ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ತಕ್ಕ ಮಟ್ಟಿಗಾದರೂ ಅಳವಡಿಸಿಕೊಳ್ಳುವ ಮೂಲಕ ಅವರನ್ನು ಸ್ಮರಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಪಾದಿಸಿದರು.
    ನಗರದ ಬಸವೇಶ್ವರ ವೃತ್ತದ ಮಹಾತ್ಮಗಾಂಧಿ ಪಾರ್ಕ್ ಎದುರು ಪ್ರತಿಷ್ಠಾಪಿಸಿರುವ ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಗೃಹ ಕಚೇರಿ ಕೃಷ್ಣಾದಿಂದ ಶನಿವಾರ ವರ್ಚುವಲ್ ಹೋಸ್ಟಿಂಗ್ ಮೂಲಕ ಅನಾವರಣಗೊಳಿಸಿ ಅವರು ಮಾತನಾಡಿದರು.
    ಬಸವಣ್ಣ ತೋರಿಸಿದ ಅನುಭವ ಮಂಟಪದ ಮಾರ್ಗ, ಸಮಾನತೆ, ಜಾತಿ-ಮತ ಭೇದವಿಲ್ಲದ ಸಮ ಸಮಾಜ ನಿರ್ಮಾಣ ಆಗಬೇಕು. ಧರ್ಮ ಹಾಗೂ ಸಮಾಜ ಬೇರೆಯಲ್ಲ, ಸ್ತ್ರೀ-ಪುರುಷ ಭೇದ ಸಲ್ಲ. ಜಾತಿಯಲ್ಲಿ ಮೇಲು-ಕೀಳು ಎಣಿಸದೇ ವ್ಯಕ್ತಿಯ ಅಂತರಂಗದ ಶಕ್ತಿ-ಶರಣಾರ್ಥ ಭಾಗಗಳ ಆಧಾರದ ಮೇಲೆ ವ್ಯಕ್ತಿತ್ವ ನಿರ್ಮಾಣ ಮಾಡಬೇಕಿದೆ ಎಂದರು.
    ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಕಲ್ಲಗಂಗೂರಿನ ರಾಮಕೃಷ್ಣ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ, ಮೂಲೆಗದ್ದೆಯ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಶಿಕಾರಿಪುರದ ಶ್ರೀ ಚನ್ನಬಸವ ಸ್ವಾಮೀಜಿ, ಜಡೆಯ ಡಾ. ಶ್ರೀ ಮಹಾಂತ ಸ್ವಾಮೀಜಿ, ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
    ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಕೃಷಿ ಸಚಿವ ಬಿ.ಸಿ.ಪಾಟೀಲ್, ಎಂಎಲ್‌ಸಿ ಆಯನೂರು ಮಂಜುನಾಥ, ಸಭಾ ಕಾರ್ಯಕ್ರಮದಲ್ಲಿ ಶಾಸಕ ಕೆ.ಬಿ.ಅಶೋಕ ನಾಯ್ಕ, ಎಂಎಲ್‌ಸಿಗಳಾದ ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಪ್ರತಿಪಕ್ಷ ನಾಯಕಿ ಯಮುನಾ ರಂಗೇಗೌಡ, ಮಾಜಿ ಮೇಯರ್ ಏಳುಮಲೈ, ಸದಸ್ಯ ಎಚ್.ಸಿ.ಯೋಗೇಶ್, ಡಿಸಿ ಕೆ.ಬಿ.ಶಿವಕುಮಾರ್, ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts