More

    ತಿಂಗಳ ಮುಂಚೆಯೇ ಭದ್ರೆ ಭರ್ತಿ: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಸಂತಸ

    ಶಿವಮೊಗ್ಗ: ಭದ್ರಾ ಜಲಾಶಯ ಪ್ರತಿ ಬಾರಿ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತಿತ್ತು. ಆದರೆ ಪ್ರಸಕ್ತ ವರ್ಷ ಒಂದು ತಿಂಗಳು ಮುಂಚೆಯೇ ತುಂಬಿರುವುದು ವಿಶೇಷ ಎಂದು ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
    ಭದ್ರಾ ಜಲಾಶಯಕ್ಕೆ ಗುರುವಾರ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜಲಾನಯನ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಅತಿ ಹೆಚ್ಚಿನ ವರ್ಷಧಾರೆ ಆಗುತ್ತಿದೆ. ಭದ್ರೆಯು ತನ್ನ ಗತ ವೈಭವವನ್ನು ಮರಳಿ ಪಡೆದಿರುವ ಕಾರಣ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಮಂದಹಾಸ ಮೂಡಿದೆ ಎಂದು ಹೇಳಿದರು.
    ಕಳೆದ 15 ದಿನಗಳ ಹಿಂದೆ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸುವ ಸಂಬಂಧ ನಡೆಸಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತಪಡಿಸಿದ್ದ ಆತಂಕ ಈಗ ದೂರವಾಗಿದೆ. ಈ ಬಾರಿಯೂ ಬೇಸಿಗೆ ಬೆಳೆಗೆ ನೀರು ಲಭ್ಯವಾಗುವುದರಲ್ಲಿ ಅನುಮಾನವಿಲ್ಲ. ಕಳೆದ ಬಾರಿ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ಹರಿಸಿದಂತೆ ಮುಂಗಾರು ಬೆಳೆಗಳಿಗೆ ಕೂಡ ನೀರು ಹರಿಸುತ್ತೇವೆ. ನಾನು ಅಧಿಕಾರದಲ್ಲಿ ಇರುವವರೆಗೆ ರೈತರಿಗೆ ನೀರಿನ ವಿಚಾರದಲ್ಲಿ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
    ನಿರ್ದೇಶಕರಾದ ವಿನಾಯಕ್, ಅಧೀಕ್ಷಕ ಇಂಜಿನಿಯರ್ ಎಂ.ಚಂದ್ರಹಾಸ್, ಕಾರ್ಯಪಾಲಕ ಇಂಜಿನಿಯರ್ ರವಿಚಂದ್ರ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts