More

    ನಾರಾಯಣ ಗುರುಗಳು ಬದಲಾವಣೆಯ ಹರಿಕಾರ: ಡಾ. ಮೋಹನ್ ಚಂದ್ರಗುತ್ತಿ

    ಶಿವಮೊಗ್ಗ: ಕೈಗಾರಿಕಾ ಕ್ರಾಂತಿ, ಮದ್ಯಪಾನ ನಿಷೇಧ ಸೇರಿ ಹಲವು ಬದಲಾವಣೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ನಾಂದಿ ಹಾಡಿದ್ದರು ಎಂದು ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.
    ನಗರದ ವಿವೇಕಾನಂದ ಬಡಾವಣೆಯಲ್ಲಿ ಆರ್ಯ ಈಡಿಗ ಮಹಿಳಾ ಸಂಘದಿಂದ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
    ನಾರಾಯಣ ಗುರುಗಳು ಧರ್ಮ ಪ್ರಚಾರ ಪ್ರಾರಂಭಿಸಿದಾಗ ಮದ್ಯ ಮಾರಾಟವನ್ನೇ ನೆಚ್ಚಿಕೊಂಡಿದ್ದ ಸಮುದಾಯಕ್ಕೆ ಪರ್ಯಾಯವಾಗಿ ಗುಡಿ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡಿದ್ದರು. ತೆಂಗಿನ ನಾರು ಬಳಸಿ ಹಗ್ಗ ತಯಾರಿಸುವ, ಕಾಲು ಒರೆಸುವ ಮ್ಯಾಟ್ ತಯಾರಿಸುವ ಉದ್ಯಮಕ್ಕೆ ಪ್ರೇರೇಪಿಸಿದ್ದರು. ಅದರಲ್ಲೂ ಹೆಣ್ಣು ಮಕ್ಕಳು ಈ ವೃತ್ತಿಯಲ್ಲಿ ತೊಡಗುವುದರಿಂದ ಸ್ವಾವಲಂಬನೆ ಹಾಗೂ ಸ್ವಾಭಿಮಾನ ಬರುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದರು.
    ಶಾಸಕ ಕೆ.ಎಸ್.ಈಶ್ವರಪ್ಪ ಅವರು ದಾನಿಗಳ ನಾಮಫಲಕ ಅನಾವರಣಗೊಳಿಸಿದರು. ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ರಾಮಪ್ಪ, ಶ್ರೀ ರೇಣುಕಾನಂದ ಸ್ವಾಮೀಜಿ ಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿದರು.
    ಬಿಲ್ಲವ ಸಂಸ್ಥೆ ಅಧ್ಯಕ್ಷ ವೇದಕುಮಾರ್ ಮಾತನಾಡಿದರು. ಈಡಿಗ ಸಮುದಾಯದ ಸಾಧಕಿಯರನ್ನು ಸನ್ಮಾನಿಸಲಾಯಿತು. ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ಅಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಎಸ್.ಶಿವಕುಮಾರ್, ಉಪಮೇಯರ್ ಲಕ್ಷ್ಮೀಶಂಕರ್ ನಾಯ್ಕ್, ಉದ್ಯಮಿ ಸುರೇಶ್ ಬಾಳೆಗುಂಡಿ, ಗೀತಾಂಜಲಿ ದತ್ತಾತ್ರೇಯ, ರಮಾಮಣಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts