More

    ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಚಪಾತಿ ಮಾಮು ಸಾವು

    ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.
    ಹಳೇ ಮಂಡ್ಲಿಯ ನಿವಾಸಿ ಅಬ್ದುಲ್ ರೆಹಮಾನ್(55) ಮೃತ ಕೈದಿ. 2012ರಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ದುಲ್ ರೆಹಮಾನ್‌ನನ್ನು ಜೈಲು ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.
    ಜೈಲಿನಲ್ಲಿ ಅಡುಗೆ ಕೆಲಸವನ್ನು ಸಹ ಮಾಡುತ್ತಿದ್ದ ಅಬ್ದುಲ್ ರೆಹಮಾನ್ ಚಪಾತಿ ಮಾಡುವಲ್ಲಿ ಪ್ರಾವಿಣ್ಯತೆ ಪಡೆದಿದ್ದ ಕಾರಣಕ್ಕೆ ಅವರನ್ನು ಸಹ ಕೈದಿಗಳು ಚಪಾತಿ ಮಾಮು ಎಂದೇ ಕರೆಯುತ್ತಿದ್ದರು. ಆದರೆ ವಯೋಸಹಜವಾಗಿ ಅಂಟಿಕೊಂಡ ಕಾಯಿಲೆಯಿಂದ ಹಲವು ದಿನಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೋಗುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ತೀವ್ರ ಸಮಸ್ಯೆಯಿಂದ ದಾಖಲಾಗಿದ್ದರು. ಕಿಡ್ನಿ ಸಮಸ್ಯೆ ಹಾಗೂ ಲಿವರ್ ವೈಫಲ್ಯ ಮತ್ತು ಗಂಟಲು ಕ್ಯಾನ್ಸರ್‌ನಿಂದ ಅಬ್ದುಲ್ ರೆಹಮಾನ್ ಬಳಲುತ್ತಿದ್ದರು ಎನ್ನಲಾಗಿದೆ. 2012ರಲ್ಲಿ ಪತ್ನಿಯನ್ನೇ ಕೊಲೆ ಮಾಡಿ ಜೈಲು ಸೇರಿದ್ದ ಅಬ್ದುಲ್ ರೆಹಮಾನ್‌ಗೆ ಜೀವಾವಧಿ ಶಿಕ್ಷೆಯಾಗಿತ್ತು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts