More

    ಶಿವಮೊಗ್ಗದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

    ಶಿವಮೊಗ್ಗ: ಸಂರಕ್ಷಣೆ, ಮರಣ ಪರಿಹಾರ, ಕನಿಷ್ಟ ವೇತನ, ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಅಕ್ಷರ ದಾಸೋಹ, ಆಶಾ ಕಾರ್ಯಕರ್ತೆಯರು ಮತ್ತು ಇತರೆ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
    ಮಹಾವೀರ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ನೂರಾರು ಪ್ರತಿಭಟನಾಕಾರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ನೌಕರರಿಗೆ ಕಾಲಮಿತಿಯೊಳಗೆ ಉಚಿತವಾಗಿ ಲಸಿಕೆ ನೀಡಬೇಕು. ಸುರಕ್ಷತಾ ಸಾಧನಗಳನ್ನು ಒದಗಿಸಬೇಕು. ಕರೊನಾ ಟೆಸ್ಟ್ ಮಾಡಿಸಿ ಸೋಂಕಿನಿಂದ ರಕ್ಷಿಸುವಂತೆ ಆಗ್ರಹಿಸಿದರು.
    ಜಿಡಿಪಿಯ ಶೇ.6ರಷ್ಟು ಹಣವನ್ನು ಆರೋಗ್ಯ ಇಲಾಖೆಗೆ ಮೀಸಲಿಟ್ಟು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಆಮ್ಲಜನಕ ಒದಗಿಸಬೇಕು. ಹೆಚ್ಚುವರಿಯಾಗಿ ಮಾಸಿಕ 10 ಸಾವಿರ ರೂ. ಕರೊನಾ ಭತ್ಯೆ ನೀಡಬೇಕು. ಸೇವೆಯಲ್ಲಿದ್ದಾಗ ಸೋಂಕಿನಿಂದ ಮೃತಪಟ್ಟದರೆ 10 ಲಕ್ಷ ರೂ. ಪರಿಹಾರ ನೀಡಬೇಕು. ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆದು ಯೋಜನೆಗಳ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸುವುದು ಸೇರಿ 18 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
    ಸಿಐಟಿಯು ಜಿಲ್ಲಾ ಅಧ್ಯಕ್ಷೆ ತುಳಸಿ ಪ್ರಭು, ಪ್ರಧಾನ ಕಾರ್ಯದರ್ಶಿ ಆರ್.ಹನುಮಮ್ಮ, ಎಸ್.ವಿಜಯಶ್ರೀ, ನಾಗರತ್ನಾ, ಭಾಗ್ಯಮ್ಮ, ಅಶ್ವಿನಿ, ತಾರಾ, ಚಂದ್ರಮ್ಮ, ಸುನೀತಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts