More

    ಸಿಎಂ ಬದಲಾವಣೆ ಊಹಾಪೋಹ: ಬಿ.ವೈ.ರಾಘವೇಂದ್ರ

    ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೆಂಬುದು ಕೇವಲ ಊಹಾಪೋಹ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದರು.
    ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಕೆಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ ಅವರಿಗೆ ಮಂತ್ರಿ ಅಥವಾ ಮತ್ತೊಂದು ಸ್ಥಾನ ದೊರಕಿಸಬೇಕೆಂದು ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿಲ್ಲ ಎಂದರು.
    ಪಕ್ಷದ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದು ಸಹಜವಾಗಿ ಪಕ್ಷಕ್ಕೆ ನಷ್ಟವಾಗಲಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದ್ದು ಅವರೇ ಸರಿ ಮಾಡುತ್ತಾರೆಂಬ ಭರವಸೆಯಿದೆ. ಎಲ್ಲ ವರ್ಗದ ಮಠಾಧೀಶರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಲಾಬಿಯಲ್ಲ. ಮಠಾಧೀಶರು ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts