More

    ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸಂಘಟಿತಗೊಳ್ಳಬೇಕಿದೆ: ಎಚ್.ಎಂ.ರೇವಣ್ಣ ಕರೆ

    ಶಿವಮೊಗ್ಗ: ಭಾರಿ ಭ್ರಷ್ಟಾಚಾರ ಮತ್ತು ಹಗರಣಗಳ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಎಂ.ರೇವಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.
    ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕಳೆದ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಕಾಂಗ್ರೆಸ್‌ನ್ನು 10 ಪರ್ಸೆಂಟ್ ಸರ್ಕಾರ ಎಂದು ಲೇವಡಿ ಮಾಡಿದ್ದರು. ಆದರೆ ಈಗಿರುವ ಬಿಜೆಪಿಯದ್ದು 40 ಪರ್ಸೆಂಟ್ ಸರ್ಕಾರ ಎಂಬುದು ಸಾಬೀತಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ದಾಖಲೆ ಸಹಿತ ಆರೋಪಿಸಿದ್ದಾರೆ. ಅಕ್ರಮದ ದಾಖಲೆ ಕೇಳಿದವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಬ್ಬರೇ ಸಾಕು ಎಂದರು.
    ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾದಿಸಿದ್ದರು. ಆನಂತರ ಸರ್ಕಾರದ ಹಿರಿಯ ಅಧಿಕಾರಿ ಅಮಾನತುಗೊಂಡರು. ಅನೇಕ ಕಿಂಗ್‌ಪಿನ್‌ಗಳು ಜೈಲು ಪಾಲಾದರು. ಹಗರಣವೇ ನಡೆದಿಲ್ಲ ಎಂದವರು ಈಗ ನಗೆಪಾಟಿಲಿಗೀಡಾಗಿದ್ದಾರೆ. ಹಗರಣಗಳ ಸರಮಾಲೆಯ ಸರ್ಕಾರವಿದು. ವಿಷಯಾಂತರ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ದೂರಿದರು.
    ಇದೇ ವೇಳೆ ಪೇ ಸಿಎಂ ಕರಪತ್ರ ಪ್ರದರ್ಶಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಗೇಲಿ ಮಾಡಿದರು. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಿವಮೂರ್ತಿ ನಾಯ್ಕ, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕೆ.ಬಿ.ಪ್ರಸನ್ನಕುಮಾರ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ಮುಖಂಡರಾದ ಎನ್.ರಮೇಶ್, ವಿಜಯಕುಮಾರ್, ವೈ.ಎಚ್.ನಾಗರಾಜ್, ಇಕ್ಕೇರಿ ರಮೇಶ್, ಡಾ.ರಾಜನಂದಿನಿ ಕಾಗೋಡು ತಿಮ್ಮಪ್ಪ, ಸಿ.ಎಸ್.ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್, ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts