

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಮುಂಖಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಬಂಧಿತ. ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಜಗನ್ನಾಥ್ ಅವರ ದೂರಿನ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ದೀಪಕ್ ಸಿಂಗ್, ಮಹಾನಗರ ಪಾಲಿಕೆ ಮಾಜಿ ಸದ್ಯ ಕೂಡ. ತನ್ನ ಪೇಸ್ಬುಕ್ ಖಾತೆಯಲ್ಲಿ ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ದೀಪಕ್ ಸಿಂಗ್ನನ್ನು ಐಪಿಸಿ ಸೆಕ್ಷನ್ 504, 505 ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.