More

    ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ ಶಿವಕುಮಾರ್ ಸೂಚನೆ

    ಶಿವಮೊಗ್ಗ: ನಗರ, ಪಟ್ಟಣ ಹಾಗೂ 268 ಗ್ರಾಪಂಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ಬೇರ್ಪಡಿಸಿ ನಿಯಮಾನುಸಾರ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಡಿಸಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ತ್ಯಾಜ್ಯ ನಿರ್ವಹಣೆ, ಕೆರೆಗಳ ಒತ್ತುವರಿ, ರಸ್ತೆ ಸುರಕ್ಷತೆ, ಕಾರ್ಮಿಕ ಪದ್ಧತಿ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸ್ಥಿತಿಗತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿ, ಘನತ್ಯಾಜ್ಯ ವಿಲೇಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ಮುಂದಿನ ಮಾಸಿಕ ಸಭೆಯಲ್ಲಿ ಅಗತ್ಯ ಮಾಹಿತಿಯೊಂದಿಗೆ ಆಗಮಿಸುವಂತೆ ತಾಕೀತು ಮಾಡಿದರು.
    ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಬಗ್ಗೆಯೂ ಮಾಹಿತಿ ಒದಗಿಸಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಈವರೆಗೆ ಸ್ಥಳಾವಕಾಶ ಗುರುತಿಸದಿರುವ ಗ್ರಾಮಗಳಲ್ಲಿ ಸ್ಥಳ ಗುರುತಿಸುವಂತೆ ಅಥವಾ ನೆರೆಯ ಗ್ರಾಮಗಳಲ್ಲಿ ಅಥವಾ ಸಮೀಪದ ಪಟ್ಟಣ ಪ್ರದೇಶಗಳಲ್ಲಿನ ಸ್ಥಳೀಯ ಸಂಸ್ಥೆಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
    ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮ: ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಯಂತ್ರಿಸುವಂತೆ ಸರ್ಕಾರದ ಆದೇಶವಿದ್ದರೂ ಅದು ಸಮರ್ಪಕವಾಗಿ ಜಾರಿಗೊಳಿಸಲಾಗಿಲ್ಲ. ಈ ಸಂಬಂಧ ತಹಸೀಲ್ದಾರ್‌ಗಳು, ಪರಿಸರ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್ ಬಳಸುವವರ ಹಾಗೂ ಅದನ್ನು ಪ್ರೇರೇಪಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಸೂಚಿಸಿದರು.
    ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಎಡಿಸಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts